Kannada NewsKarnataka NewsLatest

*ಶಾರ್ಟ್ ಸರ್ಕ್ಯೂಟ್ನಿಂದ ಆಯಿಲ್ ಗೋದಾಮಿನಲ್ಲಿ ಬೆಂಕಿ, ಕೋಟ್ಯಾಂತರ ರೂಪಾಯಿ ನಷ್ಟ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:

(ನೆಲಮಂಗಲ): ಶಾರ್ಟ್ ಸರ್ಕ್ಯೂಟ್ ನಿಂದ ಆಯಿಲ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತಿ ಉರಿದು ಕೋಟ್ಯಾಂತರ ರೂಪಾಯಿ ಮೌಲ್ಯದ ಉತ್ಪನ್ನಗಳು ಬೆಂಕಿಯಿಂದ ಹಾನಿಯಾದ ಘಟನೆ ನೆಲಮಂಗಲ ಸಮೀಪದ ಅಡಕಿಮಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೃಷ್ಣಪ್ಪ ಎಂಬುವರಿಗೆ ಸೇರಿದ 33 ಸಾವಿರ ಚದರ ಅಡಿ ವಿಸ್ತೀರ್ಣವುಳ್ಳ ಬೃಹತ್ ಗೋದಾಮು ಬೆಂಕಿಗೆ ಆಹುತಿಯಾಗಿದೆ.

ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನೆಡೆಸುತ್ತಿದ್ದಾರೆ.
ಶೆಲ್ ಕಂಪನಿಗೆ ಸೇರಿದ ಆಯಿಲ್ ಉತ್ಪನ್ನಗಳು
ಸುಮಾರು 10-12 ಅಗ್ನಿ ಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಸಿದರು.
ನೆಲಮಂಗಲ, ಪೀಣ್ಯ ಹೆಬ್ಬಾಳ, ರಾಜಾಜಿನಗರ, ಥಣಿಸಂದ್ರ, ಸುಂಕದಕಟ್ಟೆ ಮತ್ತು ಯಶವಂತಪುರ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದ್ದಾರೆ.

ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಸುಮಾರು 60-70 ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button