Latest

ಪ್ರಜಾ ತೀರ್ಪನ್ನು ಗೌರವಿಸುವ ಅಗತ್ಯವಿದೆ : ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ಬೆಂಗಳೂರು : ಕರ್ನಾಟಕ ಉಪ ಚುನಾವಣಾ ಫಲಿತಾಂಶ ಪರಿಣಾಮದಿಂದಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್, ಸೋಲಿಗೆ ಕಾರಣವಾದ ಹಿನ್ನೆಲೆ ಸೋಲಿನ ನೈತಿಕ ಹೊಣೆ ಹೊತ್ತು ಸೋನಿಯಾ ಗಾಂಧಿಗೆ ಅವರು ತಮ್ಮ ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಸಾರ್ವಜನಿಕ ತೀರ್ಪನ್ನು ಗೌರವಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿ ಸಿಎಲ್‌ಪಿ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಹೇಳಿದರು. ಅಲ್ಲದೆ ಸಿದ್ದರಾಮಯ್ಯ ಅವರು ವಿಧಾನಸಭೆಯ ಪ್ರತಿಪಕ್ಷ ನಾಯಕ ಹುದ್ದೆಗೂ ಸಹ ರಾಜೀನಾಮೆ ನೀಡಿದ್ದಾರೆ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 15 ಸ್ಥಾನಗಳಲ್ಲಿ ಕೇವಲ ಎರಡು ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ 13 ಸ್ಥಾನಗಳನ್ನು ಗೆದ್ದು ಅಧಿಕಾರವನ್ನು ಉಳಿಸಿಕೊಂಡಿದೆ.

Home add -Advt

ಸೋಲಿನ ನೈತಿಕ ಹೊಣೆ: ಸಿದ್ದರಾಮಯ್ಯ, ದಿನೇಶ್ ಗುಡೂರಾವ್ ರಾಜಿನಾಮೆ

Related Articles

Back to top button