Kannada NewsKarnataka NewsLatest

*ಶ್ರೀಕಾಂತ್ ಪೂಜಾರಿಗೆ ಷರತ್ತುಬದ್ಧ ಜಾಮೀನು ಮಂಜೂರು*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಭೆ, ಅಡಿಕೆ ಮಳಿಗೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶ್ರೀಕಂತ್ ಪೂಜಾರಿಯನ್ನು ಡಿಸೆಂಬರ್ 29ರಂದು ಹುಬ್ಬಳ್ಳಿ ಶಹರ ಠಾಣೆ ಪೊಲೀಸರು ಬಂಧಿಸಿದ್ದರು.

31 ವರ್ಷಗಳ ಹಿಂದೆ ನಡೆದಿದ್ದ ಪ್ರಕರಣವನ್ನು ರೀ ಓಪನ್ ಮಾಡಿ ಕರಸೇವಕನನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ನಮ್ಮನ್ನೂ ಬಂಧಿಸಿ ಎಂಬ ಪ್ರತಿಭಟನೆ ಆರಂಭಿಸಿತ್ತು. ಅಲ್ಲದೇ ಪೊಲೀಸ್ ಠಣೆಗಳ ಎದುರು ಬಿಜೆಪಿ ನಾಯಕರು ಧರಣಿ ಆರಂಭಿಸಿದ್ದರು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಶ್ರೀಕಾಂತ್ ಪೂಜಾರಿಗೆ ಹುಬ್ಬಳ್ಳಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

Home add -Advt

Related Articles

Back to top button