
ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ, ಕರಸೇವಕ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರು ಆಗಿರುವ ಹಿನ್ನೆಲೆಯಲ್ಲಿ ಇಂದು ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ.
31 ವರ್ಷಗಳ ಹಿಂದೆ ಹುಬ್ಬಳ್ಳಿಯಲ್ಲಿ ರಾಮಜನ್ಮಭೂಮಿಗಾಗಿ ನಡೆದ ಹೋರಾಟದಲ್ಲಿ ಗಲಭೆಯುಂಟಾಗಿತ್ತು. ಈ ಪ್ರಕರಣದಲ್ಲಿ ಕೆಲ ದಿನಗಳ ಹಿಂದೆ ಬಂಧಿಸಲ್ಪಟ್ಟಿದ್ದ ಶ್ರೀಕಾಂತ್ ಪೂಜಾರಿಗೆ ಹುಬ್ಬಳ್ಳಿ 1ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನಿನ್ನೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.
ಇಂದು ಷರತ್ತು ಪೂರೈಸಿದ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ