Karnataka NewsLatestPolitics

*ಬಿಹಾರ ಚುನಾವಣೆಗಾಗಿ ಸಿಎಂ ಸಿದ್ದರಾಮಯ್ಯ 300 ಕೋಟಿ ಕಲೆಕ್ಷನ್ ಮಾಡಿದ್ದಾರೆ: ಶ್ರೀರಾಮುಲು ಗಂಭೀರ ಆರೋಪ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿ ಅಲುಗಾಡುತ್ತಿದೆ. ಅವರು ತಮ್ಮ ಕುರ್ಚಿ ಗಟ್ಟಿ ಮಾಡಿಕೊಳ್ಳಲು ಸಚಿವರು, ಶಾಸಕರಿಂದ ವಸೂಲಿ ಮಾಡಿದ್ದು, ಅದನ್ನು ಬಿಹಾರ ಚುನಾವಣೆಗೆ ನೀಡಿದ್ದಾರೆ. ಈ ಮೂಲಕ ತಮ್ಮ ಕುರ್ಚಿ ಭದ್ರಪಡಿಸಿಕೊಳ್ಳುವ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ಮಾಜಿ ಸಚಿವ ಶ್ರೀರಾಮುಲು ಆರೋಪಿಸಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, ಸಿಎಂ ಸಿದ್ದರಾಮಯ್ಯ ಬಿಹಾರ ಚುನವಣೆಗಾಗಿ 300 ಕೋಟಿ ಕಲೆಕ್ಷನ್ ಮಾಡಿದ್ದಾರೆ ಎಂದು ಆರೋಪಿಸಿದರು.

ಸಚಿವರು, ಶಾಸಕರನ್ನು ಔತಣಕೂಟಕ್ಕೆಂದು ಕರೆದು ಅವರಿಂದ ವಸೂಲಿ ಮಾಡಿ 300 ಕೋಟಿ ಹಣ ಸಂಗ್ರಹಿಸಿ ಅದನ್ನು ಬಿಹಾರ ಚುನಾವಣೆಗೆ ಕಳುಹಿಸಿಕೊಟ್ಟಿದ್ದಾರೆ ಎಂದರು.

Home add -Advt

Related Articles

Back to top button