
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಡಾಲ ಅಂಕಲಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ 48 ನೇ ದಿನದ ಮಂಡಲ ಪೂಜೆಯಲ್ಲಿ ಪಾಲ್ಗೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಶ್ರೀ ಕೃಷ್ಣನ ದರ್ಶನ ಆಶೀರ್ವಾದ ಪಡೆದು ನಾಡಿನ ಸುಭೀಕ್ಷೆಗಾಗಿ ಪ್ರಾರ್ಥಿಸಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಿರಂತರವಾಗಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಧಾರ್ಮಿಕ ಕ್ಷೇತ್ರವಾಗಿ ಹೆಸರಾಗಿದೆ. ಪ್ರತಿ ಊರಲ್ಲಿ ಒಂದಿಲ್ಲೊಂದು ಮಂದಿರಗಳು ನಿರ್ಮಾಣವಾಗಿದ್ದು, ಸದಾ ಕಾರ್ಯಕ್ರಮಗಳು ನಡೆಯುತ್ತಿವೆ. ಗ್ರಾಮಸ್ಥರು ಶೃದ್ಧೆ, ಭಕ್ತಿಯಿಂದ ದೇವರ ಸಾನ್ನಿಧ್ಯದಲ್ಲಿ ವಿವಿಧ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಕ್ಷೇತ್ರದಲ್ಲಿ ನಡೆಯುವ ಯಾವುದೇ ಕಾರ್ಯಕ್ರಮವನ್ನು ನಾನು ತಪ್ಪಿಸಿಕೊಳ್ಳುವುದಿಲ್ಲ. ನನ್ನದೇ ಕುಟುಂಬದ ಕಾರ್ಯಕ್ರಮವೆನ್ನುವಂತೆ ಪಾಲ್ಗೊಳ್ಳುತ್ತಿದ್ದೇನೆ ಎಂದು ಹೆಬ್ಬಾಳಕರ್ ಈ ಸಂದರ್ಭದಲ್ಲಿ ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ದೇವಸ್ಥಾನ ಟ್ರಸ್ಟ್ ಕಮೀಟಿಯ ಮುಖ್ಯಸ್ಥರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ