
ಪ್ರಗತಿವಾಹಿನಿ ಸುದ್ದಿ; ರಾಮನಗರ: ರಾಮನಗರದಲ್ಲಿ ರಾಮಮಂದಿರ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ರಚಿಸಲಾಗಿದ್ದ ಶ್ರೀರಾಮದೇವರ ಬೆಟ್ಟ ಅಭಿವೃದ್ಧಿ ಸಮಿತಿಯನ್ನು ರದ್ದುಗೊಳಿಸಿ ರಾಮನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಬಿಜೆಪಿ ಮುಖಂಡರ ನಡುವೆ ಜಟಾಪಟಿ ನಡೆದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥ ನಾರಾಯಣ ಸೂಚನೆ ಮೇರೆಗೆ ಮುಂದಿನ ಆದೇಶದವರೆಗೂ ರಾಮದೇವರ ಬೆಟ್ಟ ಅಭಿವೃದ್ಧಿ ಸಮಿತಿಯನ್ನು ರದ್ದು ಮಾಡಿ ಆದೇಶಿಸಲಾಗಿದೆ.
ರಾಜ್ಯ ಸರ್ಕಾರ ರಾಮದೇವರ ಬೆಟ್ಟದಲ್ಲಿ ರಾಮಮದಿರ ನಿರ್ಮಾಣ ಮಾಡಲು ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಬಜೆಟ್ ನಲ್ಲಿ ಅನುದಾನ ಘೋಷಣೆ ಮಾಡಿದೆ. ಈ ಬೆಳವಣಿಗೆಯಲ್ಲೇ ರಾಮದೇವರ ಬೆಟ್ಟ ಅಭಿವೃದ್ಧಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಅಶ್ವಥನಾರಾಯಣ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು. ಈಗ ಈ ಸಮಿತಿಯನ್ನು ಸಚಿವರ ಸೂಚನೆಯಂತೆ ರದ್ದು ಮಾಡಲಾಗಿದೆ ಎಂದು ತಿಳಿದಿಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ