Latest

ಪ್ರಧಾನಿ ನಿವಾಸಕ್ಕೆ ಬೆಂಕಿ ಹಚ್ಚಿ ಜನರ ಆಕ್ರೋಶ; ರಾಜೀನಾಮೆ ಘೋಷಿಸಿದ ವಿಕ್ರಮಸಿಂಘೆ

ಪ್ರಗತಿವಾಹಿನಿ ಸುದ್ದಿ; ಕೊಲಂಬೋ: ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿರುವ ಶ್ರೀಲಂಕಾದಲ್ಲಿ ಕಂಗೆಟ್ಟ ನಾಗರಿಕರು ಸರ್ಕಾರದ ವಿರುದ್ಧ ದಂಗೆ ಎದ್ದಿದ್ದು, ಲಂಕಾ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ನಿವಾಸಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಲಂಬೋದಲ್ಲಿ ಉದ್ರಿಕ್ತರ ಗುಂಪು ಪ್ರಧಾನಿ ರನೀಲ್ ವಿಕ್ರಮಸಿಂಘೆ ಅವರ ಖಾಸಗಿ ನಿವಾಸಕ್ಕೆ ಬೆಂಕಿ ಹಚ್ಚಿದ್ದು, ವಾಹನಗಳನ್ನು ಜಖಂಗೊಳಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ಸರ್ಕಾರಿ ನಿವಾಸಕ್ಕೆ ನುಗ್ಗಿ, ಅಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದ ಜನರು, ರಾಜಪಕ್ಸೆ ರಾಜೀನಾಮೆಗೆ ಆಗ್ರಹಿಸಿದ್ದರು. ನಾಗರಿಕರ ದಾಳಿಯಿಂದ ಕಂಗೆಟ್ಟ ರಾಜಪಕ್ಸೆ ದೇಶಬಿಟ್ಟು ಪರಾರಿಯಾಗಿದ್ದಾರೆ.

ವಿಶ್ವ ಹಣಕಾಸು ಸಂಸ್ಥೆ ಲಂಕಾ ವಿದ್ಯಮಾನಗಳನ್ನು ಗಮನಿಸಿದ್ದು, ರಾನಿಲ್ ವಿಕ್ರಮಸಿಂಘೆ ಅವರೊಂದಿಗೆ ಮಾತುಕತೆ ನಡೆಸಿದೆ. ಈ ಎಲ್ಲಾ ಬೆಳವಣಿಗಗಳ ಬೆನ್ನಲ್ಲೇ ವಿಕ್ರಮಸಿಂಘೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಆದರೆ ನೂತನ ಸರ್ಕಾರ ರಚನೆಯಾಗುವವರೆಗೂ ಪ್ರಧಾನಿಯಾಗಿ ಮುಂದುವರೆಯಲಿದ್ದಾರೆ.
ಜ್ಯೋತಿಷ್ಯ ಕೇಳುವ ನೆಪದಲ್ಲಿ ಚಿನ್ನಾಭರಣ ಕದ್ದು ಪರಾರಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button