ಪ್ರಗತಿವಾಹಿನಿ ಸುದ್ದಿ; ಕೊಲಂಬೋ: ಆರ್ಥಿಕ ಬಿಕ್ಕಟ್ಟಿನಿಂದ ಸಂಕಷ್ಟಕ್ಕೀಡಾಗಿರುವ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ ಎಂದು ಲಂಕಾ ಪ್ರಧಾನಿ ಕಚೇರಿ ಮಾಹಿತಿ ನೀಡಿದೆ.
ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಶ್ರೀಲಂಕಾದಲ್ಲಿ ಜನರು ದಂಗೆ ಎದ್ದಿದ್ದು, ಇಂದು ಕೂಡ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ರಾಜಧಾನಿ ಕೊಲಂಬೊಗೆ ಧಾವಿಸುತ್ತಿರುವ ನಾಗರಿಕರು ಮತೆ ಪ್ರಧಾನಿ ನಿವಾಸ, ಅಧ್ಯಕ್ಷರ ನಿವಾಸವನ್ನು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಕೊಲಂಬೋಗೆ ಜನರು ಗುಂಪು ಗುಂಪಾಗಿ ಆಗಮಿಸುತ್ತಿದ್ದು, ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಕುಟುಂಬ ಸಮೇತ ದೇಶ ಬಿಟ್ಟು ಮಾಲ್ಡಿವ್ಸ್ ಗೆ ಪರಾರಿಯಾಗಿದ್ದಾರೆ.
ಬಿಕ್ಕಟ್ಟಿನ ಸಂದರ್ಭದಲ್ಲಿ ರಾಜಪಕ್ಸೆ ದೇಶ ಬಿಟ್ಟು ಪಲಾಯನ ಮಾಡಿರುವ ಹಿನ್ನೆಲೆಯಲ್ಲಿ ಹಂಗಾಮಿ ಅಧ್ಯಕ್ಷರನ್ನಾಗಿ ರಾನಿಲ್ ವಿಕ್ರಮ ಸಿಂಘೆ ಅವರನ್ನು ನೇಮಕ ಮಾಡಲಾಗಿದೆ. ದೇಶಾದ್ಯಂತ ಜನಾಕ್ರೋಶ ಭುಗಿಲೇಳುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಕೈಮೀರುತ್ತಿರುವುದರಿಂದ ಶ್ರೀಲಂಕಾದಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.
ಗೃಹಪ್ರವೇಶಕ್ಕೆ ರೆಡಿಯಾಗಿದ್ದ ಮನೆ ಮೇಲೆ ಗುಡ್ಡ ಕುಸಿತ; ಮಳೆ ಅವಾಂತರಕ್ಕೆ ಕಂಗಾಲಾದ ಜನರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ