Kannada NewsLatestNational

*ಏರ್ ಪೋರ್ಟ್ ಕಂಬಕ್ಕೆ ಡಿಕ್ಕಿ ಹೊಡೆದ ಇಂಡಿಗೋ ವಿಮಾನ*

ಪ್ರಗತಿವಾಹಿನಿ ಸುದ್ದಿ: ಏರ್ ಪೋರ್ಟ್ ಕಂಬಕ್ಕೆ ಇಂಡಿಗೋ ವಿಮಾನವೊಂದು ಡಿಕ್ಕಿ ಹೊಡೆದು ಅವಾಂತರ ಸಂಭವಿಸಿರುವ ಘಟನೆ ನಡೆದಿದೆ.

ಜಮ್ಮು-ಕಾಶ್ಮೀರದ ಶ್ರೀನಗರದ ಅಂತರಾಷ್ಟ್ರೀಯ ಏರ್ ಪೋರ್ಟ್ ನಲ್ಲಿ ಇಂಡಿಗೋ ವಿಮಾನ ಲ್ಯಾಂಡಿಂಗ್ ಆದ ಬಳಿಕ ಪಾರ್ಕಿಂಗ್ ಮಾಡುತ್ತಿದ್ದ ವೇಳೆ ವಿಮಾನದ ಮುಂಭಾಗ ಏರ್ ಪೋರ್ಟ್ ನ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಅದೃಷ್ಟವಶಾತ್ ವಿಮಾನದಲ್ಲಿದ್ದ ಪ್ರಯಾಣಿಕರು ಹಾಗೂ ಸಿಬ್ಬಂದಿಗಳಿಗೆ ಯಾವುದೇ ಹಾನಿಯಾಗಿಲ್ಲ, ಎಲ್ಲರೂ ಸುರಕ್ಷಿತವಾಗಿದ್ದಾರೆ. ನವಿ ಮುಂಬೈನಿಂದ ಶ್ರೀನಗರಕ್ಕೆ ಕಾರ್ಯನಿರ್ವಹಿಸುತ್ತಿದ್ದ ಇಂಡಿಗೋ ಏರ್‌ಲೈನ್ಸ್‌ನ ‘6ಇ 225’ ವಿಮಾನವು ನಿಗದಿತ ವೇಳಾಪಟ್ಟಿಯಂತೆ ರನ್‌ವೇನಲ್ಲಿ ಸುಗಮವಾಗಿ ಲ್ಯಾಂಡ್ ಆಗಿತ್ತು. ಬೆಳಗ್ಗೆ 9.02 ರ ಸುಮಾರಿಗೆ ವಿಮಾನ ನಿಲ್ದಾಣದ ‘ಬೇ ನಂ. 06’ ರಲ್ಲಿ ವಿಮಾನವನ್ನು ಪಾರ್ಕ್ ಮಾಡಲು ತರುತ್ತಿದ್ದಾಗ, ಸ್ವಯಂಚಾಲಿತ ಪಾರ್ಕಿಂಗ್ ಗೈಡೆನ್ಸ್ ಸಿಸ್ಟಮ್ ಕಂಬಕ್ಕೆ ವಿಮಾನದ ಒಂದು ಭಾಗ ಡಿಕ್ಕಿಯಾಗಿದೆ.

ಘಟನೆ ಬಳಿಕ ವಿಮಾನ ಸಿಬ್ಬಂದಿಗಳು ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿಯಲು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಹಾಗೂ ವಿಮಾನ ನಿಲ್ದಾಣ ಪ್ರಾಧಿಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button