LatestNationalPolitics

*ಶೃಂಗೇರಿ ಅಂಚೆ ಮತಗಳ ಮರು ಎಣಿಕೆ ಕೇಸ್: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ: ಮತ್ತೆ ಶಾಸಕ ಸ್ಥಾನ ಗಿಟ್ಟಿಸಿಕೊಂಡ ಕಾಂಗ್ರೆಸ್ ನ ರಾಜೇಗೌಡ*

ಪ್ರಗತಿವಾಹಿನಿ ಸುದ್ದಿ: ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಿಂದ ಶಾಸಕ ಸ್ಥಾನ ಕಳೆದುಕೊಂಡಿದ್ದ ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಅವರಿಗೆ ಸುಪ್ರಿಂ ಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಮೂಲಕ ರಾಅಜೇಗೌಡ ಅವರ ಶಾಸಕ ಸ್ಥಾನವನ್ನು ಮುಂದುವರೆಸುವಂತೆ ಆದೇಶಿಸಿದೆ.

ಅಂಚೆ ಮತ ಮರು ಎಣಿಕೆಗೆ ಆದೇಶಿಸಿದ್ದ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಕಾಂಗ್ರೆಸ್ ​​ನ ರಾಜೇಗೌಡ ಅವರು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ​ ವಿಚಾರಣೆ ನಡೆಸಿದ ನ್ಯಾಯಾಲಯ, ​​ ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಮರು ಮತ ಎಣಿಕೆಯ ದಾಖಲೆ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿ, ವಿಚಾರಣೆಯನ್ನು ಮೇ 21ಕ್ಕೆ ಮುಂದೂಡಿದೆ.

ಅಂಚೆ ಮತ ಮರು ಎಣಿಕೆಯಲ್ಲಿ ಬಿಜೆಪಿ ಡಿ.ಎನ್‌. ಜೀವರಾಜ್‌ ಗೆಲುವು ಸಾಧಿಸಿದ್ದರು. ಆದರೆ, ಇದೀಗ ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ. ಇದರಿಂದ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡ ಅವರೇ ಮತ್ತೆ ಶಾಸಕರಾಗಿ ಮುಂದುವರಿಯಲಿದ್ದಾರೆ. ಚುನಾವಣಾ ಆಯೋಗಕ್ಕೆ ನೋಟೀಸ್‌ ನೀಡಿ ವಿಚಾರಣೆಯನ್ನು ಮೇ.21 ಕ್ಕೆ ಮುಂದೂಡಿದೆ.


Home add -Advt

Related Articles

Back to top button