ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ದೇಶಾದ್ಯಂತ ಲಾಕ್ ಡೌನ್ ಸಡಿಲವಾಗುತ್ತಿದ್ದು, ನಾಳೆಯಿಂದ ದೇವಸ್ಥಾನಗಳ ಬಾಗಿಲು ತೆರೆಯಲು ಅವಕಾಶ ನೀಡಲಾಗಿದೆ. ಎರಡು ತಿಂಗಳಿಗೂ ಅಧಿಕ ಕಾಲ ದೇವರ ದರ್ಶನವಿಲ್ಲದೇ ಬೇಸರದಲ್ಲಿದ್ದ ಭಕ್ತರು ದೇವಸ್ಥಾನಗಳಿಗೆ ಭೇಟಿ ನೀಡಬಹುದಾಗಿದೆ.
ಆದರೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾಂಬೆ ಹಾಗೂ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನಗಳನ್ನು ತೆರೆಯದಿರುವ ನಿರ್ಧಾರ ಮಾಡಲಾಗಿದೆ. ಶೃಂಗೇರಿ ಶಾರದಾಂಬೆ ಹಾಗೂ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನ ರಾಜ್ಯದ ಪ್ರಮುಖ ದೇವಸ್ಥಾನಗಳಾಗಿದ್ದು, ಇಲ್ಲಿಗೆ ತಮಿಳುನಾಡು ಹಾಗೂ ಆಂಧ್ರಪ್ರದೇಶದಿಂದಲೂ ಭಕ್ತರು ಬರುತ್ತಾರೆ. ಈ ನಿಟ್ಟಿನಲ್ಲಿ ಕೆಲದಿನಗಳ ವರೆಗೆ ಈ ದೇವಾಲಯಗಳನ್ನು ತೆರೆಯದಿರಲು ನಿರ್ಧರಿಸಲಾಗಿದೆ.
ದೇವಸ್ಥಾನಗಳು, ಚರ್ಚ್ ಹಾಗೂ ಮಸೀದಿಗಳಿಗೆ ಭೇಟಿ ನೀಡಲು ಕೇಂದ್ರ ಸರ್ಕಾರ ಕೆಲವೊಂದು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಈ ನಿಯಮಾವಳಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಧಾರ್ಮಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಪಾಲಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ