
ತಾಲೂಕು ಬಂದ್
ಪ್ರಗತಿವಾಹಿನಿ ಸುದ್ದಿ: ಹಣ್ಣಿನ ರಾಜ ಮಾವಿನ ಹಣ್ಣಿನ ಬೆಲೆ ಕುಸಿತದಿಂದ ಕಂಗಾಲಾಗಿರುವ ಮಾವು ಬೆಳೆಗಾರರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಮಾಅವು ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದು, ರಸ್ತೆಗಳಿಗೆ ಮಾವಿನಹಣ್ಣು ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾವು ಬೆಳೆಗೆ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಇಂದು ಶ್ರೀನಿವಾಸಪುರ ತಾಲೂಕು ಬಂದ್ ಗೆ ಕರೆ ನೀಡಲಾಗಿದ್ದು, ಮಾವು ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದರಎ. ಮಾವು ಬೆಳೆಗಾರರ ಪ್ರತಿಭಟನೆಗೆ ವಿವಿಧ ಸಂಘಟನೆಗಳು, ಬಿಜೆಪಿ-ಜೆಡಿಎಸ್ ರಾಜಕೀಯ ಪಕ್ಷಗಳು ಸಾಥ್ ನೀಡಿವೆ.
ಶ್ರೀನಿವಾಸಪುರದ ಬಸ್ ನಿಲ್ದಾಣದ ಬಳಿ ರಸ್ತೆಗೆ ಮಾವಿನಹಣ್ಣು ಸುರಿದು ರೈತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.