ಪ್ರಗತಿವಾಹಿನಿ ಸುದ್ದಿ: ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ಅವರಿಗೆ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಕ್ಲಾಸ್ ತೆಗೆದುಕೊಂಡಿರುವ ಘಟನೆ ನಡೆದಿದೆ.
ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಂಗಾರು ಹನುಮಂತು ಸೋಲಿನ ಬಗ್ಗೆ ಚರ್ಚೆಯಾಗಿದೆ. ಚುನವಣೆ ಫಲಿತಾಂಶದ ಬಳಿಕ ರಾಮುಲು ಬಗ್ಗೆ ಬಂಗಾರು ಹನುಮಂತು ಬಿಜೆಪಿ ನಾಯಕರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಾಮುಲು ಕಾರ್ಯವೈಖರಿ ಬಗ್ಗೆ ರಾಧಾಮೋಹನ್ ದಾಸ್ ಪ್ರಶ್ನಿಸಿದ್ದಾರೆ. ಅಭ್ಯರ್ಥಿ ಪರವಾಗಿ ಸರಿಯಾಗಿ ಕಾರ್ಯನಿರ್ವಹಿಸಿಲ್ಲ ಎಂಬ ದೂರು ಬಂದಿದೆ ಎಂದಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ರಾಮುಲು, ನಾನು ಚುನವಣೆಯಲ್ಲಿ ಕಷ್ಟಪಟ್ಟು ಶ್ರಮಿಸಿದ್ದೇನೆ. ನನ್ನ ವಿರುದ್ಧ ಸುಖಾಸುಮ್ಮನೇ ಆರೋಪ ಮಾಡಲಾಗಿದೆ. ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದವರಿಗೆ ಬೆಲೆ ಸಿಗುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು. ಈ ವೇಳೆ ಹೆಚ್ಚೇನು ಮಾತನಾಡದ ರಾಧಾಮೋಹನ್ ದಾಸ್, ರಾಜ್ಯಾಧ್ಯಕ್ಷರಾಗಿ ನೀವಾದರೂ ಹೇಳಬೇಕಲ್ಲವೇ? ಎಂದು ವಿಜಯೇಂದ್ರ ಅವರನ್ನು ಪ್ರಶ್ಮಿಸಿದ್ದಾರೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ