ಪ್ರಗತಿವಾಹಿನಿ ಸುದ್ದಿ; ಕೊಪ್ಪಳ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಆಡಳಿತ ಹಾಗೂ ವಿಪಕ್ಷ ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಪರಸ್ಪರ ಆರೋಪ-ಪ್ರತ್ಯಾರೋಗಳಲ್ಲಿ ತೊಡಗಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ, ಡಿ.ಕೆ.ಶಿವಕುಮಾರ್ ವಿರುದ್ಧ ಸದಾ ಕೆಂಡ ಕಾರುವ ಸಾರಿಗೆ ಸಚಿವ ಶ್ರೀರಾಮುಲು ಅವರಿಬ್ಬರು ಚಿರತೆಗಳು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶ್ರೀರಾಮುಲು, ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಜೋಡೆತ್ತುಗಳು ಎಂದು ಕಾಂಗ್ರೆಸ್ ನವರು ಹೇಳುತ್ತಿದ್ದಾರೆ. ಈಗ ಅವರು ಜೋಡೆತ್ತುಗಳಲ್ಲ, ಚಿರತೆಗಳು… ಇಬ್ಬರೂ ಸಿಎಂ ಕುರ್ಚಿಗಾಗಿ ಕಿತ್ತಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಇಬ್ಬರು ನಾಯಕರಿಗೂ ಸಿಎಂ ಕುರ್ಚಿಯದ್ದೇ ಚಿಂತೆ. ಮುಖ್ಯಮಂತ್ರಿ ಕುರ್ಚಿಗಾಗಿ ಈ ಎರಡೂ ಚಿರತೆಗಳು ಪೈಪೋಟಿ ನಡೆಸಿವೆ. ಆದರೆ ಸಧ್ಯಕ್ಕೆ ಮುಖ್ಯಮಂತ್ರಿಗಳ ಕುರ್ಚಿ ಖಾಲಿಯಿಲ್ಲ. ಎಷ್ಟೇ ಪೈಪೋಟಿ ನಡೆಸಿದರೂ ಪ್ರಯೋಜನವಿಲ್ಲ ಎಂದು ಹೇಳಿದರು.
ಮುಂಬರುವ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿದೆ. ಆ ಎರಡೂ ಚಿರತೆಗಳು ಏನೇ ಕಾದಾಟ, ಪೈಪೋಟಿ ನಡೆಸಿದರೂ ಬಸವರಾಜ್ ಬೊಮ್ಮಾಯಿ ಅವರೇ ಬಿಜೆಪಿಯ ಮುಂದಿನ ಮುಖ್ಯಮಂತ್ರಿಗಳು ಎಂದು ಹೇಳಿದರು.
ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಬಿಭತ್ಸ್ಯ ಘಟನೆ; ಮಗನ ಜೊತೆ ಸೇರಿ ಪತಿಯನ್ನೇ 22 ತುಂಡುಗಳನ್ನಾಗಿ ಕತ್ತರಿಸಿದ ಪತ್ನಿ
https://pragati.taskdun.com/another-chilling-murder-in-delhi-woman-son-cut-mans-body-into-22-pieces/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ