Belagavi NewsBelgaum NewsLatestUncategorized

*ಸಿಎಂ ಸ್ಥಾನ ವೀರಶೈವ ಲಿಂಗಾಯಿತರಿಗೆ ನೀಡಬೇಕು; ಶ್ರೀಶೈಲ ಜಗದ್ಗುರುಗಳ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ನಿನ್ನೆ ಒಕ್ಕಲಿಗ ಸಮಾಜದ ಸ್ವಾಮೀಜಿಯೊಬ್ಬರು ಸಿಎಂ ಸಿದ್ದರಾಮಯ್ಯನವರಿಗೆ ನೇರವಾಗಿ ಹೇಳಿದ್ದ ಬೆನ್ನಲ್ಲೇ ಇದೀಗ ಲಿಂಗಾಯಿತ ಸ್ವಾಮೀಜಿಯೊಬ್ಬರು ವೀರಶೈವ ಲಿಂಗಾಯಿತರಿಗೆ ಸಿಎಂ ಸ್ಥಾನ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಭಾರಿ ಚರ್ಚೆ ಆರಂಭವಾಗಿದ್ದು, ನಿನ್ನೆ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆಯೇ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಡಿ.ಕೆ.ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಿ. ಅವರಿಗೂ ಅವಕಾಶ ಸಿಗಲಿ ಎಂದು ಸಿಎಂ ಸಿದ್ದರಾಮಯ್ಯನವರಿಗೆ ಹೇಳಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಇದೀಗ ಲಿಂಗಾಯಿತ ಸಮುದಾಯದ ಸ್ವಾಮೀಜಿ ವೀರಶೈವ ಲಿಂಗಾಯಿತರಿಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕು ಎಂದಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾತನಾಡಿದ ಶ್ರೀಶೈಲ ಪೀಠದ ಜಗದ್ಗುರು ಶಿವಾಚಾರ್ಯ ಸ್ವಾಮೀಜಿ, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ವೀರಶೈವ ಲಿಂಗಾಯಿತರಿಗೆ ಸಿಎಂ ಸ್ಥಾನ ನೀಡಬೇಕು ಎಂದಿದ್ದಾರೆ.

Home add -Advt

ಲಿಂಗಾಯಿತರು ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕಿದ್ದಾರೆ. ಹಾಗಾಗಿ ವೀರಶೈವ ಲಿಂಗಾಯಿತರಿಗೆ ಸ್ಥಾನ ನೀಡಬೇಕು. ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ, ಎಸ್.ಎಸ್.ಮಲ್ಲಿಕಾರ್ಜುನ್, ಶಾಮನೂರು ಶಿವಶಂಕರಪ್ಪಗೆ ಸಿಎಂ ಆಗುವ ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.


Related Articles

Back to top button