ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಪವಿತ್ರ ಯಾತ್ರಾಸ್ಥಳ ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಮತ್ತೆ ಕನ್ನಡಿಗರ ಮೇಲೆ ಹಲ್ಲೆ ನಡೆಸಲಾಗಿದೆ. ಕೆ ಎಸ್ ಆರ್ ಟಿಸಿ ಬಸ್ ಚಾಲಕ ಹಾಗೂ ನಿರ್ವಾಹಕನ ಮೇಲೆ ಹಲ್ಲೆ ನಡೆಸಿರುವ ಕಿಡಿಗೇಡಿಗಳು ಬಸ್ ನ ಗಾಜುಗಳನ್ನು ಪುಡಿಗೈದಿದ್ದಾರೆ.
ವಿಜಯಪುರ ಡಿಪೋಗೆ ಸೇರಿದ ಕೆ ಎಸ್ ಆರ್ ಟಿಸಿ ಬಸ್ ಚಾಲಕ ಬಸವರಾಜ್ ಹಾಗೂ ನಿರ್ವಾಹಕ ಜೆಡಿ ಮಾದರ್ ಮೇಲೆ ಹಲ್ಲೆ ನಡೆಸಲಾಗಿದೆ.ಬಸ್ ನ ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ. ತಡರಾತ್ರಿ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಶ್ರೀಶೈಲದ ಬಸ್ ನಿಲ್ದಾಣದ ಬಳಿ ಬಸ್ ನಿಲ್ಲಿಸಿ ಊಟ ಮಾಡಿ ಕಟ್ಟೆಯ ಮೇಲೆ ಬಸ್ ಚಾಲಕ ಮಲಗಿದ್ದಾಗ ಏಕಾಏಕಿ ದಾಳಿ ನಡೆಸಿದ ದುಷ್ಕರ್ಮಿಗಳ ಗುಂಪು ಹಲ್ಲೆ ನಡೆಸಿದೆ. ಅಶ್ಲೀಲ ಪದಗಳನ್ನು ಬಳಸಿ ಕನ್ನಡಿಗರನ್ನು ಬೈದಿದ್ದಾರಲ್ಲದೇ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಚಾಲಕ ಬಸವರಾಜ್ ಮುಖ ಹಾಗೂ ಕಾಲಿಗೆ ಗಂಭೀರವಾಗಿ ಗಾಯಗಳಾಗಿದ್ದು, ಚಾಲಕ ಕೂಗಾಟ ಕೇಳಿ ಇತರ ಬಸ್ ಚಾಲಕರು ಸ್ಥಳಕ್ಕೆ ಧಾವಿಸಿದ್ದಾರೆ. ಸ್ಥಳದಲ್ಲಿ ಗಲಾಟೆ ನಡೆದಿದ್ದು, ಬಳಿಕ ದುಷ್ಕರ್ಮಿಗಳು ಕಾಲ್ಕಿತ್ತಿದ್ದಾರೆ.
ಶ್ರೀಶೈಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಯುಗಾದಿಯಲ್ಲಿಯೂ ಶ್ರೀ ಶೈಲದಲ್ಲಿ ಕನ್ನಡಿಗರ ಮೇಲೆ ಹಲ್ಲೆಯಾಗಿತ್ತು.
ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆ ಎಚ್ಚರಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ