ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಪ್ರಸಿದ್ಧ ಯಾತ್ರಾಸ್ಥಳ ಆಂಧ್ರಪ್ರದೇಶದ ಶ್ರೀಶೈಲಂ ನಲ್ಲಿ ತಡರಾತ್ರಿ ಭಕ್ತರ ಎರಡು ಗುಂಪುಗಳ ನಡುವೆ ಸಂಘರ್ಷ ನಡೆದಿದ್ದು, ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಆಂಧ್ರಪ್ರದೇಶದ ಸ್ಥಳೀಯರು ಹಾಗೂ ಕನ್ನಡಿಗರ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ನೂರಾರು ವಾಹನಗಳನ್ನು ಜಖಂ ಗೊಳಿಸಿದ್ದಾರೆ. ಗಲಾಟೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು, ಸುನ್ನಿಪೆಂಟಾ ನಗರ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘರ್ಷಣೆಯಲ್ಲಿ ರಾಜ್ಯದ ಹಲವು ವಾಹನಗಳ ಗಾಜು ಪುಡಿ ಪುಡಿಯಾಗಿವೆ. ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ಮುಂಜಾಗೃತಾ ಕ್ರಮವಾಗಿ ಶ್ರೀಶೈಲಂ ನಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ