Kannada NewsKarnataka NewsLatest
*BREAKING: ಹಬ್ಬದ ದಿನವೇ ದುರಂತ: ಈಜಲು ಹೋಗಿದ್ದ ವಿದ್ಯಾರ್ಥಿ ಕೆರೆ ನೀರಿನಲ್ಲಿ ಮುಳುಗಿ ಸಾವು*

ಪ್ರಗತಿವಾಹಿನಿ ಸುದ್ದಿ: ಗೌರಿ ಗಣೇಶ ಹಬ್ಬದ ಸಂದರ್ಭದಲ್ಲೇ ದುರಂತವೊಂದು ನಡೆದಿದೆ. ಕೆರೆಯಲ್ಲಿ ಈಜಲು ಹೋಗಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೋಮಿನಕೊಪ್ಪ ದೊಡ್ಡ ಕೆರೆಯಲ್ಲಿ ನಡೆದಿದೆ.
ಶಿವಮೊಗ್ಗದ ವಿನೋಬಾನಗರದ ಸೋಮಿನಕೊಪ್ಪ ದೊಡ್ಡಕೆರೆಯಲ್ಲಿ ಘಟನೆ ನಡೆದಿದೆ. 15 ವರ್ಷದ ಬೃಹಾನ್ ನೀರು ಪಾಲಾಗಿ ಮೃತಪಟ್ಟಿರುವ ಬಾಲಕ. ಎಸ್.ಎಸ್.ಎಲ್.ಸಿ ಓದುತ್ತಿದ್ದ ಬೃಹಾನ್ ಇಂದು ಸ್ನೇಹಿತರೊಂದಿಗೆ ಸೇರಿ ಕೆರೆಯಲ್ಲಿ ಈಜಲು ಹೋಗಿದ್ದ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಮಗನನ್ನು ಕಳೆದುಕೊಂಡಿರುವ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಶಿವಮೊಗ್ಗದ ವಿನೋಬಾನಗರ ಪೊಲೀಸ್ ಠಾಣೆ ವ್ಯಾಅಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬಾಲಕನಿಗಾಗಿ ಶೋಧಕಾರ್ಯ ನಡೆಸಿದ್ದಾರೆ.



