*ಪತ್ನಿ ಹೆಸರಲ್ಲಿ ಸವದತ್ತಿ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸವದತ್ತಿ ರೇಣುಕಾ ಯೆಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಪತ್ನಿ ಪಾರ್ವತಿ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗಾವಿ ಜಿಲ್ಲೆಯ ಸವದತ್ತಿಗೆ ಆಗಮಿಸಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ಪತ್ನಿ ಪಾರ್ವತಿ ಹೆಸರಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ, ಹೆಚ್.ಕೆ.ಪಾಟೀಲ್, ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಮತ್ತು ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಪ್ರಥಮ ಸಭೆ ನಡೆಸಿದ ಸಿಎಂ
ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಗಾಗಿ ಯಲ್ಲಮ್ಮ ಸನ್ನಿಧಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಬಳಿಕ, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಮತ್ತು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಪ್ರಥಮ ಸಭೆಯನ್ನು ತಮ್ಮದೇ ಅಧ್ಯಕ್ಷತೆಯಲ್ಲಿ ನಡೆಸಿದರು.

ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕ್ಷೇತ್ರದ ಶಾಸಕರಾದ ವಿಶ್ವಾಸ್ ವೈದ್ಯ, ಚನ್ನರಾಜ ಹಟ್ಟಿಹೊಳಿ ಮತ್ತು ಜಿಲ್ಲೆಯ ಶಾಸಕರುಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ