
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:
ಬೆಂಗಳೂರಿನ ವಿಜಯನಗರದ ಬಸವೇಶ್ವರ ಸುಜ್ಞಾನ ಮಠದಲ್ಲಿ ನಡೆದ ಇಷ್ಟಲಿಂಗ ಮಹಾ ಪೂಜಾ ಹಾಗೂ ಶ್ರೀ ಸಿದ್ದಾಂತ ಶಿಖಾಮಣಿ ಆಧ್ಯಾತ್ಮಿಕ ಆಶೀರ್ವಚನ ಸಮಾರಂಭದ 3ನೇ ದಿನವಾದ ಇಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ “ಶ್ರೀ ಸಿದ್ದಾಂತ ಶಿಖಾಮಣಿ-ಭಗವದ್ಗೀತಾ ಸಮನ್ವಯ “ಗ್ರಂಥವನ್ನು ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಸಚಿವರು ಮಾತನಾಡಿ, ಮಕ್ಕಳಿಗೆ ಓದುವುದನ್ನ ರೂಢಿಸಬೇಕು. ಇಂದು ವಿದೇಶದಲ್ಲಿ ಅಧ್ಯಯನ ಹೆಚ್ಚಾಗಿದೆ. ಆದರೆ ಬೆಂಗಳೂರಿನಂತಹ ನಗರದಲ್ಲಿ ಜನ ಮರೆಯುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.
ಈ ಗ್ರಂಥವನ್ನ ಪ್ರಧಾನ ಮಂತ್ರಿಗಳಿಂದ ಬಿಡುಗಡೆ ಮಾಡಿಸುವುದಾಗಿ ಅವರು ಹೇಳಿದರು.
ಈ ಸಂದರ್ಭದಲ್ಲಿ ಸಚಿವ ಅಂಗಡಿ ದಂಪತಿಗೆ ಸಾನಿಧ್ಯವಹಿಸಿದ್ದ ಶ್ರೀಶೈಲ ಜಗದ್ಗುರುಗಳು, ಹುಕ್ಕೇರಿ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿಗಳು, ವಿಭೂತಿಪುರಮಠದ ಸ್ವಾಮಿಗಳು ಹಾಗೂ ಉಪಸ್ಥಿತರಿದ್ದ ಎಲ್ಲಾ ಸ್ವಾಮೀಜಿ ಗಳು ಸತ್ಕಾರ ಮಾಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ