Kannada NewsKarnataka NewsLatestPolitics
*ಪಾಕ್ ಪರ ಘೋಷಣೆ ಕೋಗಿದ್ದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ; ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಒಂದು ವೇಳೆ ಪಾಕ್ ಪರ ಘೋಷಣೆ ಕೂಗಿದ್ದು ಸಾಬೀತಾದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆಯೇ ಎಂಬುದು ತನಿಖೆಯಗಬೇಕಿದೆ. ಆ ನಿಟ್ಟಿನಲ್ಲಿ ವಿಡಿಯೋವನ್ನು ಎಫ್ ಎಸ್ ಎಲ್ ಗೆ ರವಾನಿಸಲಾಗಿದೆ. ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಪಾಕ್ ಪರ ಘೋಷಣೆ ಕೂಗಿದ್ದರೆ ಅದು ರಾಷ್ಟ್ರದ್ರೋಹವಾಗುತ್ತದೆ. ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ