Karnataka NewsLatestPolitics

*ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. 2028ರ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಮಂಡ್ಯದ ಕೆ.ಆರ್‌ ಪೇಟೆಯಲ್ಲಿ ದಿ.ಕೆ.ಆರ್.ಪೇಟೆ ಕೃಷ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ.

Home add -Advt

ಈ ವೇಳೆ ಅಭಿಮಾನಿಗಳು ಮುಂದಿನ 10 ವರ್ಷಗಳ ಚುನಾವಣಾ ರಾಜಕೀಯದಲ್ಲಿ ಇರುವಂತೆ ಮನವಿ ಮಾಡಿದ್ದಾರೆ. ಆದರೂ 2028ರ ಚುನಾವಣೆಗೆ ನಾನು ಸ್ಪರ್ಧೆ ಮಾಡಲ್ಲ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

ಮೇ 28 ರಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಮೂಲಕ ಐದು ದಶಕಗಳ ಸುದೀರ್ಘ ರಾಜಕೀಯ ಹೋರಾಟ, ಎರಡನೇ ಅವಧಿಯ ಮುಖ್ಯಮಂತ್ರಿ ಆಡಳಿತ ಅಂತ್ಯ ಕಂಡಿತ್ತು. ಹೈಕಮಾಂಡ್ ಸೂಚನೆ ಮತ್ತು ರಾಹುಲ್ ಗಾಂಧಿಯವರ ಸಂದೇಶಕ್ಕೆ ಗೌರವ ನೀಡಿ, ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸುವ ಮೂಲಕ ರಾಜ್ಯ ರಾಜಕಾರಣದ ಮಹತ್ವದ ಹಂತವೊಂದಕ್ಕೆ ತೆರೆ ಎಳೆದಿದ್ದರು. ಇದೀಗ ಚುನಾವಣಾ ರಾಜಕೀಯದಿಂದಲೇ ನಿವೃತ್ತಿ ಘೋಷಿಸಿದ್ದಾರೆ.

Related Articles

Back to top button