Kannada NewsKarnataka NewsLatest

ನೇಕಾರರಿಗೆ ಬಂಪರ್ ಕೊಡುಗೆ ಘೋಷಿಸಿದ ಸಿದ್ದರಾಮಯ್ಯ

*ಸಣ್ಣ ನೇಕಾರರಿಗೆ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ : ಮುಖ್ಯಮಂತ್ರಿ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಸಣ್ಣ ನೇಕಾರರಿಗೆ 10 ಹೆಚ್.ಪಿ ವರೆಗೆ  ಉಚಿತ ವಿದ್ಯುತ್  ನೀಡಲಾಗುವುದು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

 ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ 10 ಹೆಚ್ ಪಿ  ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳಿಗೆ  ವಿದ್ಯುತ್ ಒದಗಿಸುವ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಬಗ್ಗೆ ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ  ಸಭೆಯಲ್ಲಿ ನೇಕಾರರ ನಿಯೋಗದ ಜತೆ ಚರ್ಚಿಸಿದ ಬಳಿಕ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಈ ಮಹತ್ವದ ತೀರ್ಮಾನವನ್ನು ಪ್ರಕಟಿಸಿದ್ದಾರೆ.   

ಈ ಕುರಿತು ಹಿಂದೆ ನೇಕಾರರಿಗೆ ನೀಡಿದ ಭರವಸೆಯಂತೆ  ಅದನ್ನು ಮನ್ನಾ ಮಾಡಲಾಗುವುದು ಎಂದರು. ಇದರಿಂದ ಸಣ್ಣ ನೇಕಾರರಿಗೆ ದೊಡ್ಡ ಅನುಕೂಲವಾಗಲಿದೆ  ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. 

Home add -Advt

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ,ಕೈಮಗ್ಗ ಮತ್ತು ಜವಳಿ ಇಲಾಖೆ ಆಯುಕ್ತ ಗೌರವ್ ಗುಪ್ತಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ  ಕಾರ್ಯದರ್ಶಿ ಜಯರಾಂ, ಜವಳಿ ಇಲಾಖೆ ಕಾರ್ಯದರ್ಶಿ ಪಿ.ಎಸ್.ಎನ್.ಕುಮಾರ್  ಉಪಸ್ಥಿತರಿದ್ದರು.

Related Articles

Back to top button