Karnataka NewsPolitics

*ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಲು ಸಾಲು ದೂರು ದಾಖಲಾಗುತ್ತಿವೆ. ಸಿದ್ದರಾಮಯ್ಯ ಅವರನ್ನು ಸಿಎಂ ಕುರ್ಚಿಯಿಂದ ಇಳಿಸಲು ರಾಜ್ಯ ಬಿಜೆಪಿ ಸತತ ಯತ್ನ ನಡೆಸುತ್ತಿದ್ದಂತಿದೆ. ಬಿಜೆಪಿ ಎಂಎಲ್ ಸಿ ಅರುಣ್ ಎಂಬುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಕೋಟ್ಯಂತರ ರೂಪಾಯಿ ಹಣ ದುರುಪಯೋಗ ಮಾಡಿಕೊಂಡಿರುವ ಆರೋಪ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ 1,494 ಕೋಟಿ ರೂಪಾಯಿ ಹಣ ದುರುಪಯೋಗಪಡಿಸಿಕೊಂಡಿದ್ದಾರೆ. ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಯಲ್ಲಿ ಬಾಕಿ ಉಳಿದಿದ್ದ ಹಣದ ಬಗ್ಗೆ ಹಲವುಬಾರಿ ಸರ್ಕಾರಕ್ಕೆ ಪತ್ರ ಬರೆದರೂ ಯಾವುದೇ ಉತ್ತರ ಬಂದಿಲ್ಲ. ಸರ್ಕಾರದ ಖಜಾನೆಯಲ್ಲಿಯೂ ಈ ಹಣವಿಲ್ಲ.

Home add -Advt

ಸಿಎಂ ಸಿದ್ದರಾಮಯ್ಯ ಈ ಹಣ ದುರುಪಯೋಗ ಪಡಿಸಿಕೊಂಡಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಕೋರಿ ಪರಿಷತ್ ಸದಸ್ಯ ಅರುಣ್, ರಾಜ್ಯಪಾಲರಿಗೆ ದೂರು ನೀಡಿದ್ದಾರೆ.


Related Articles

Back to top button