*ಸಿದ್ದರಾಮಯ್ಯ ಅವರ ಅನುಭವ ಹಂಚಿಕೊಳ್ಳಲು ರಾಷ್ಟ್ರ ರಾಜಕಾರಣಕ್ಕೆ ಆಯ್ಕೆ: ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಸಿಎಂ ಸಿದ್ದರಾಮಯ್ಯ ಅವರ ಅನುಭವವನ್ನ ಬಳಸಿಕೊಳ್ಳಲು ರಾಷ್ಟ್ರಮಟ್ಟದಲ್ಲಿ ಸಲಹೆಗಾರರಾಗಿ ಆಯ್ಕೆ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರನ್ನ ಯಾವ ಕಾರಣಕ್ಕೆ ಹಾಗೂ ಯಾವ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಓಬಿಸಿ ಸಲಹಾ ಸಮಿತಿಗೆ ಆಯ್ಕೆ ಮಾಡಿದ್ದಾರೆ ಎಂದು ಗೊತ್ತಿಲ್ಲ. ಈ ಬಗ್ಗೆ ಹೈಕಮಾಂಡ್ ಅವರೇ ಉತ್ತರ ಕೊಡಬೇಕು. ಬಹುಶಃ ಅವರ ಅನುಭವವನ್ನ ರಾಷ್ಟ್ರ ಮಟ್ಟದಲ್ಲಿ ಬಳಕೆ ಮಾಡಿಕೊಳ್ಳಲು ಆಯ್ಕೆ ಮಾಡಿರಬೇಕು. ಅವರ ಅನುಭವ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿರದಿರಲಿ, ದೇಶಕ್ಕೂ ಅವರಿಂದ ಸಹಾಯವಾಗಲಿ ಎಂದು ಆಯ್ಕೆ ಮಾಡಿರಬಹುದು ಎಂದರು
ಅವರು ರಾಷ್ಟ್ರ ಮಟ್ಟದ ಸಮಿತಿಗೆ ಆಯ್ಕೆ ಆಗಿದ್ದಾರೆ ಎಂದ ಮಾತ್ರಕ್ಕೆ ಅವರು ಬೆಂಗಳೂರು ಬಿಟ್ಟು ದೆಹಲಿಗೆ ಹೋಗುತ್ತಾರೆ ಎಂದಲ್ಲ. ಅವರು ಸಿಎಂ ಆಗಿ ಇಲ್ಲಿಯೂ ಇರುತ್ತಾರೆ. ಅಲ್ಲಿ ಸಹ ಸಹಾಯ ಮಾಡುತ್ತಾರೆ. ಅಲ್ಲದೇ ಸಿದ್ದರಾಮಯ್ಯ ಹೆಚ್ಚುವರಿ ಜವಾಬ್ದಾರಿಯನ್ನು ಒಪ್ಪಿಕೊಳ್ಳುತ್ತಾರೋ ಇಲ್ಲವೋ ಕಾದು ನೋಡೋಣ ಎಂದು ಹೇಳಿದ್ದಾರೆ.