*ನಿಯೋಜಿತ ಸಿಎಂ, ಡಿಸಿಎಂ ಇಬ್ಬರಿಗೂ ಸಿದ್ದರಾಮಯ್ಯ ಅಭಿನಂದನೆ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಧನ್ಯವಾದ ಅರ್ಪಿಸಿದರು.  ಹಾಗೆಯೇ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಜಿ.ಪಮೇಶ್ವರ್ ಅವರೂ ಧನ್ಯವಾದ ಅರ್ಪಿಸಿದರು.  ಸಿದ್ದರಾಮಯ್ಯ ಅವರು ಇಬ್ಬರಿಗೂ ಅಭಿನಂದಿಸಿ ಶುಭಕೋರಿದರು.  ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರು ಈ‌ ಸಂದರ್ಭದಲ್ಲಿ ಉಪಸ್ಥಿತರಿದ್ದು ಇಬ್ಬರಿಗೂ ಅಭಿನಂದಿಸಿದರು. *ಹೆಚ್ಚವರಿ ಡಿಸಿಎಂ ಹುದ್ದೆಗೆ ಹೈಕಮಾಂಡ್ ನಕಾರ: ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ ಪದಗ್ರಹಣ ಸಾಧ್ಯತೆ*