Karnataka NewsLatestPolitics
*BREAKING: ಬ್ರೇಕ್ ಫಾಸ್ಟ್ ಮೀಟಿಂಗ್ ಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ*


ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದಾರೆ.
ಡಿಸಿಎಂ ಆಹ್ವಾನದ ಮೇರೆಗೆ ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಹೋದರ ಡಿ.ಕೆ.ಸುರೇಶ್, ಸಿಎಂ ಸಿದ್ದರಾಮಯ್ಯ ಅವರಿಗೆ ಹೂಗುಚ್ಛ ನೀಡಿ, ಶಾಲು ಹೊದಿಸಿ ಆತ್ಮೀಯವಾಗಿ ಬರ ಮಾಡಿಕೊಂಡರು.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಉಪಹಾರ ಕೂಟದ ಸಭೆ ಆರಂಭವಾಗಿದ್ದು, ತೀವ್ರ ಕುತೂಹಲ ಮೂಡಿಸಿದೆ.




