Kannada NewsKarnataka NewsLatestPolitics
*ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ಅಂತ್ಯ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ಗಾಗಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದು, ಬೆಳಗಿನ ಉಪಹಾರ ಸವಿದಿದ್ದಾರೆ.
ಡಿಸಿಎಂ ಆಹ್ವಾನದ ಮೇರೆಗೆ ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಹೋದರ ಡಿ.ಕೆ.ಸುರೇಶ್, ಸಿಎಂ ಸಿದ್ದರಾಮಯ್ಯ ಅವರಿಗೆ ಹೂಗುಚ್ಛ ನೀಡಿ, ಶಾಲು ಹೊದಿಸಿ ಆತ್ಮೀಯವಾಗಿ ಬರ ಮಾಡಿಕೊಂಡರು.
ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಂಸದ ಡಿ.ಕೆ.ಸುರೇಶ್, ಶಾಸಕ ಡಾ.ರಂಗನಾಥ್ ಒಟ್ಟಾಗಿ ಕುಳಿತು ಉಪಹಾರ ಸೇವಿಸಿದರು. ಈ ವೇಳೆ ಹಲವು ವಿಚಾರಗಳ ಬಗ್ಗೆ ಚರ್ಚಿಸಿದರು.



