Politics

*ಮಳೆ ಹಾನಿ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿದ್ದು, ಮಳೆ ಹಾನಿ ಪ್ರದೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಲಿದ್ದಾರೆ.

ಬೆಂಗಳೂರು ಗೃಹ ಕಚೇರಿ ಕೃಷ್ಣಾದಿಂದ ಸಂಜೆ 4:30ಕ್ಕೆ ತೆರಳಲಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ಮಳೆಯಿಂದ ಹಾನಿಯಾಗಿರುವ ಮಾನ್ಯತಾ ಟೆಕ್ ಪಾರ್ಕ್, ಸಾಯಿಲೇಔಟ್, ಈಜೀಪುರ, ಹೆಚ್ ಎಸ್ ಆರ್ 5ನೇ ಮತ್ತು 6ನೇ ವಲಯ, ಸಿಲ್ಕ್ ಬೋರ್ಡ್ ಪ್ರದೇಶ ಸೇರಿದಂತೆ ವಿವಿಧೆಡೆ ಖುದ್ದು ಭೇಟಿ ನೀಡಿ ಪಪರಿಶೀಲನೆ ನಡೆಸಲಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button