
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಬೆಳಗಾವಿಗೆ ಆಗಮಿಸಲಿದ್ದಾರೆ.
ಸಿದ್ದರಾಮಯ್ಯ ಶುಕ್ರವಾರ ಸಂಜೆ ಬೆಳಗಾವಿಗೆ ಆಗಮಿಸಿ ಶನಿವಾರ ಮತ್ತು ಭಾನುವಾರ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.
ಡಿ.ಕೆ.ಶಿವಕುಮಾರ ಶನಿವಾರ ಬೆಳಗ್ಗೆ ಬೆಳಗಾವಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಂಜೆ ಹುಬ್ಬಳ್ಳಿಗೆ ತೆರಳುವರು.
ಶನಿವಾರ ಬೆಳಗ್ಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅರಳಿಕಟ್ಟಿಯಲ್ಲಿ ನಡೆಯಲಿರುವ ಪಟ್ಟಾಧಿಕಾರ ಮಹೋತ್ಸವದಲ್ಲಿ ಇಬ್ಬರು ನಾಯಕರೂ ಭಾಗವಹಿಸಲಿದ್ದಾರೆ.
ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ಅವರ ಪ್ರವಾಸ ಪಟ್ಟಿ ಇಲ್ಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ