*ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಾವಲು ವಾಹನಗಳ ನಡುವೆ ಅಪಘಾತ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಾವಲು ಪಡೆ ವಾಹನಗಳ ನಡುವೆ ಡಿಕ್ಕಿಯಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವ ನಿಟ್ಟಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಬಳ್ಳಾಪುರಕ್ಕೆ ತೆರಳಿದ್ದರು. ಈ ವೇಳೆ ಅವರ ಬೆಂಗಾವಲು ಪಡೆ ವಾಹನಗಳ ನಡುವೆ ಅಪಘಾತ ಸಂಭವಿಸಿದೆ. ಶಿಡ್ಲಘಟ್ಟದ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಮುಂದೆ ಹೋಗುತ್ತಿದ್ದ ಬೆಂಗಾವಲು ಪಡೆ ಜೀಪ್ ಗೆ ಹಿಂದಿನಿಂದ ಬರುತ್ತಿದ್ದ ಜೀಪ್ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. … Continue reading *ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಾವಲು ವಾಹನಗಳ ನಡುವೆ ಅಪಘಾತ*