Kannada NewsKarnataka NewsLatestPolitics

*ಇವಿಎಂ ಬದಲು ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು*

ಪ್ರಗತಿವಾಹಿನಿ ಸುದ್ದಿ: ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು, ನಮ್ಮಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಅನೇಕ ದೇಶಗಳು ಇವಿಎಂ ಬಳಸಿ ಪುನಃ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡುತ್ತಿದ್ದಾರೆ ಎಂದೂ ಮುಖ್ಯಮಂತ್ರಿಗಳು ತಿಳಿಸಿದರು.

ಧರ್ಮಸ್ಥಳ ಪ್ರಕರಣವನ್ನು ಎನ್.ಐ. ಎ ಗೆ ವಹಿಸಬೇಕೆಂದು ಸ್ವಾಮೀಜಿಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ರಾಜ್ಯ ಸರ್ಕಾರ ಎಸ್.ಐ.ಟಿ ರಚನೆ ಮಾಡಿದ್ದು ಅವರೂ ಪೋಲೀಸಿನವರೇ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button