Belagavi NewsBelgaum NewsKannada NewsKarnataka NewsLatestPolitics

ಶನಿವಾರ ಬೆಳಗಾವಿಗೆ ಸಿದ್ದರಾಮಯ್ಯ?

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮುಡಾ ಹಗರಣದ ಸದ್ದು ಜೋರಾಗಿರುವ ಮಧ್ಯೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಬೆಳಗಾವಿಗೆ ಆಗಮಿಸುವ ಸಾಧ್ಯತೆ ಇದೆ.

ಬೆಳಗಾವಿ ಜಿಲ್ಲೆಯಲ್ಲಿ ಉಂಟಾಗಿರುವ ಭೀಕರ ಪ್ರವಾಹ ಪರಿಸ್ಥಿತಿಯ ಅವಲೋಕನ ನಡೆಸಲು ಮುಖ್ಯಮಂತ್ರಿಗಳು ಆಗಮಿಸಲಿದ್ದಾರೆ ಎಂದು ಗೊತ್ತಾಗಿದ್ದು, ಜಿಲ್ಲಾಡಳಿತಕ್ಕೆ ಸಿದ್ಧವಾಗಿರುವಂತೆ ಸೂಚನೆ ನೀಡಲಾಗಿದೆ.

Related Articles

ಜಿಲ್ಲೆಯ ಯಾವ ಪ್ರದೇಶಕ್ಕೆ ಮುಖ್ಯಮಂತ್ರಿಗಳು ಭೇಟಿ ನೀಡಲಿದ್ದಾರೆ ಎನ್ನುವುದು ಇನ್ನೂ ಅಂತಿಮವಾಗಿಲ್ಲ. ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಮುಖ್ಯಮಂತ್ರಿಗಳು ಪರಿಶೀಲನೆ ನಡೆಸುವ ಸಾಧ್ಯತೆ ಇದೆ.

ಆ.3ರಂದು ಮುಖ್ಯಮಂತ್ರಿಗಳ ಜನ್ಮದಿನವೂ ಇದೆ. ಜೊತೆಗೆ, ಅಂದೇ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಪಾದಯಾತ್ರೆಯನ್ನೂ ಆರಂಭಿಸಲಿವೆ.

Home add -Advt

ಈ ಎಲ್ಲ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ ಇನ್ನಷ್ಟೇ ಖಚಿತವಾಗಬೇಕಿದೆ.

Related Articles

Back to top button