Kannada NewsKarnataka NewsLatestPolitics
*BREAKING: ದೆಹಲಿಗೆ ಪ್ರಯಾಣ ಬೆಳೆಸಿದ ಸಿಎಂ ಸಿದ್ದರಾಮಯ್ಯ; ಕೆಲ ಸಚಿವರು ಸಾಥ್*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಕೆಲ ಸಚಿವರು ಸಾಥ್ ನೀಡಿದ್ದಾರೆ.
ಬೆಂಗಳೂರುನ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಹೆಚ್.ಸಿ.ಮಹದೇವಪ್ಪ, ಅಶೋಕ್ ಪಟ್ಟಣ್, ಪೊನ್ನಣ್ಣ ಸಾಥ್ ನೀಡಿದ್ದಾರೆ.
ದೆಹಲಿ ತಲುಪಿದ ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಲಿದ್ದು, ಈ ವೇಳೆ ಸಚಿವ ಸಂಪುಟ ಪುನಾರ್ಚನೆ ವಿಚಾರವಾಗಿ ಚರ್ಚಿಸಲಿದ್ದಾರೆ. ಒಟ್ಟಾರೆ ಸಿಎಂ ದೆಹಲಿ ಪ್ರವಾಸ ಕುತೂಹಲ ಮೂಡಿಸಿದೆ.



