Belagavi NewsBelgaum NewsKannada NewsKarnataka NewsNationalPolitics

*ಸಿದ್ದರಾಮಯ್ಯ ಯಾವ ಸಂದರ್ಭದಲ್ಲೂ ರಾಜೀನಾಮೆ ಕೊಡಬೇಕಾಗಿ ಬರಬಹುದು: ಸಂಸದ ಜಗದೀಶ್ ಶೆಟ್ಟರ್*

ಪ್ರಗತಿವಾಹಿನಿ ಸುದ್ದಿ: ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ ಯಾವುದೇ ಹುನ್ನಾರ ನಡೆಸುತ್ತಿಲ್ಲ. ಆದರೆ ಯಾರು ತಪ್ಪು ಮಾಡಿದ್ದಾರೋ ಅವರ ರಾಜೀನಾಮೆ ಕೇಳುತ್ತಿದ್ದೇವೆ. ಸಿಎಂ ಸಿದ್ದರಾಮಯ್ಯ ಯಾವ ಸಂದರ್ಭದಲ್ಲೂ ರಾಜೀನಾಮೆ ಕೊಡಬೇಕಾಗಿ ಬರಬಹುದು ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಪ್ರಕಾರ ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ತಪ್ಪು ಮಾಡಿದ್ದಾರೆ. ಆದರೆ ಅವತ್ತಿನ ಬಿ.ಎಸ್ ಯಡಿಯೂರಪ್ಪ ಅವರ ಪ್ರಕರಣ ಹಾಗೂ ಇವತ್ತಿನ ಸಿದ್ದರಾಮಯ್ಯ ಅವರ ಪ್ರಕರಣಕ್ಕೆ ಹೋಲಿಕೆ ಮಾಡುವುದು ಸರಿಯಲ್ಲ ಎಂದರು.

ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣಗಳಿಗೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ ಮುಂಗಾರು ಅಧಿವೇಶನದಲ್ಲಿ ಚರ್ಚಿಸಲು ಅವಕಾಶ ನೀಡಲಿಲ್ಲ. ಮುಡಾ ಹಗರಣದಲ್ಲಿ ಅವರು ನೇರವಾಗಿ ಭಾಗಿಯಾಗಿದ್ಧಾರೆ. ಆದರೂ ಕೂಡ ಸಿಬಿಐ ತನಿಖೆಯನ್ನು ಎದುರಿಸಲು ಸಿದ್ಧರಿಲ್ಲ. ಅಧಿವೇಶನದಲ್ಲಿ ವಿಪಕ್ಷೀಯರ ಪ್ರಶ್ನೆಗೆ ಉತ್ತರಿಸಲು ಅಸಮರ್ಥ ಸಿದ್ಧರಾಮಯ್ಯನವರು ಅಧಿವೇಶನ ಮುಗಿದ ಮಾರನೇಯ ದಿನ ಮಾಧ್ಯಮಗೋಷ್ಟಿಯ ಮುಖಾಂತರ ಉತ್ತರವನ್ನು ನೀಡಿದ್ದಾರೆ. ಈಗಾಗಲೇ ರಾಜ್ಯಪಾಲರು ನೋಟಿಸ್ ನೀಡಿದ್ದು, ಮುಂದಿನ ವಿಚಾರ ಅವರಿಗೆ ಬಿಟ್ಟದ್ದು ಎಂದರು.

ವಿಪಕ್ಷೀಯರ ಆಗ್ರಹಕ್ಕೆ ಮಣಿಯದ ಸರ್ಕಾರದ ವಿರುದ್ಧ ಬಿಜೆಪಿ ಪಾದಯಾತ್ರೆಗೆ ಮುಂದಾಗಿದೆ. ವರಿಷ್ಠರೊಂದಿಗೆ ಚರ್ಚೆಯ ಬಳಿಕ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ಕೂಡ ಈಗ ಪಾದಯಾತ್ರೆಗೆ ಬೆಂಬಲಿಸಿದೆ. ಪಾದಯಾತ್ರೆಗೆ ಸಂಬಂಧಿಸಿದಂತೆ ಉತ್ತರ ಕರ್ನಾಟಕದ ದಕ್ಷಿಣ ಕರ್ನಾಟಕ ಎಂದೇನು ಇಲ್ಲ ವರಿಷ್ಠರ ಸೂಚನೆಯಂತೆ ಪಾದಯಾತ್ರೆ ನಡೆಯುತ್ತದೆ ಎಂದರು. 

ಇನ್ನು ಸಿದ್ಧರಾಮಯ್ಯನವರನ್ನು ಬಿಜೆಪಿಯವರು ಸಿಎಂ ಸ್ಥಾನದಿಂದ ಕೆಳಗಿಳಿಸಲು ಹುನ್ನಾರ ನಡೆಸಿದ್ದಾರೆಂಬ ಡಿ.ಸಿ.ಎಂ ಡಿ.ಕೆ. ಶಿವಕುಮಾರ್ ಅವರ ಆರೋಪವನ್ನು ತಳ್ಳಿಹಾಕಿದ ಅವರು ಕಾಂಗ್ರೆಸ್ ಸರ್ಕಾರ ಹಗರಣಗಳಲ್ಲಿ ಸಿಲುಕಿ ಹಾಕಿಕೊಂಡಿದೆ. ಸಿಎಂ ಸಿದ್ಧರಾಮಯ್ಯ ಮುಡಾ ಹಗರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ. ರಾಜ್ಯದಲ್ಲಿ ಸೂಕ್ಷ್ಮ ಪರಿಸ್ಥಿತಿ ನಿರ್ಮಾಣವಾಗಿದ್ದು, ಸ್ವತಃ ಸಿಎಂ ಸಿದ್ಧರಾಮಯ್ಯ ಅವರು ರಾಜೀನಾಮೆ ನೀಡುವ ಪರಿಸ್ಥಿತಿ ಬಂದೊದಗಿದೆ ಎಂದರು. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button