Latest

ಬೈಕ್ ಗಳ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಮೂವರು ಸಾವು

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ ಕುಂದಗೋಳ ಬಳಿ ಸಂಭವಿಸಿದೆ.

ಬೈಕ್ ಸವಾರರು ನೂಲ್ವಿಯಿಂದ ಕುಂದಗೋಳಕ್ಕೆ ಹೊರಟಿದ್ದರು. ಕುಂದಗೋಳದಿಂದ ವಾಪಸ್ ಆಗುತ್ತಿದ್ದ ಮತ್ತೊಂದು ಬೈಕ್ ಪರಸ್ಪರ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎರಡೂ ಬೈಕ್ ಗಳು ಸಂಪೂರ್ಣ ನುಜ್ಜುಗುಜ್ಜಾಗಿವೆ.

Home add -Advt

ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button