*ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ: ವೇದಿಕೆಗೆ ಜಂಪ್ ಮಾಡಿ ಮುನ್ನುಗ್ಗಿದ ವ್ಯಕ್ತಿ*
ಪ್ರಗತಿವಾಹಿನಿ ಸುದ್ದಿ: ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ಮತ್ತೆ ಭದ್ರತಾ ವೈಫಲ್ಯವಾಗಿರುವ ಘಟನೆ ನಡೆದಿದೆ.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದು ಬೃಹತ್ ಮಾನವ ಸರಪಳಿ ಚಳವಳಿಯನ್ನು ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ ಉದ್ಘಾಟಿಸಿದರು. ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ವ್ಯಕ್ತಿಯೊಬ್ಬ ವೇದಿಕೆಗೆ ಜಂಪ್ ಮಾಡಿ ಆತಂಕ ಸೃಷ್ಟಿಸಿದ್ದಾರೆ.
ಶಾಲುಗಳನ್ನು ಹಾಕಿಕೊಂಡಿದ್ದ ವ್ಯಕ್ತಿ ಏಕಾಏಕಿ ವೇದಿಕೆಗೆ ನುಗ್ಗಿ ಬಂದಿದ್ದಾನೆ. ಕೆಲಕಾಲ ಸಿಎಂ ಹಾಗೂ ಸಚಿವರು ಗಾಬರಿಯಾಗಿದ್ದಾರೆ. ಮುಖ್ಯಮಂತ್ರಿಗಳತ್ತ ಮುನ್ನಿಗ್ಗಲು ಯತ್ನಿಸಿದ್ದಾನೆ. ತಕ್ಷಣ ಎಚ್ಚೆತ್ತ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದರೂ ಬಿಡಿಸಿಕೊಲ್ಲಲು ಯತ್ನಿಸಿದ ಆತ ತನ್ನ ಬಳಿ ಇದ್ದ ಶಾಲನ್ನು ತೆಗೆದು ಮುಖ್ಯಮಂತ್ರಿಗಳತ್ತ ಎಸೆದು ಹೈಡ್ರಾಮ ಮಾಡಿದ್ದಾನೆ.
ಸದ್ಯ ವ್ಯಕ್ತಿಯನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ