Karnataka NewsLatestPolitics
*ಮೈಸೂರು ದಸರಾ ಮಹೋತ್ಸವದಲ್ಲಿ ವೈಮಾನಿಕ ಪ್ರದರ್ಶನ: ರಕ್ಷಣಾ ಸಚಿವರನ್ನು ಭೇಟಿಯಾಗಲಿರುವ ಸಿಎಂ*

ಪ್ರಗತಿವಾಹಿನಿ ಸುದ್ದಿ: ಮೈಸೂರು ದಸರಾ ಮಹೋತ್ಸವದಲ್ಲಿ ವೈಮಾನಿಕ ಪ್ರದರ್ಶನ ಆಯೋಜಿಸುವ ಕುರಿತು ಚರ್ಚಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಲಿದ್ದಾರೆ.
ಬುಧವಾರ ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಲಿರುವ ಮುಖ್ಯಮಂತ್ರಿಯವರು ಸಂಜೆ 04.30ಕ್ಕೆ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಲಿದ್ದಾರೆ.