Kannada NewsKarnataka NewsLatestPolitics

*ನ್ಯಾಯಾಲಯದಲ್ಲಿ ಸುಳ್ಳು ಹೇಳಲು ಸಾಧ್ಯವೇ? ಸಿಎಂ ಸಿದ್ದರಾಮಯ್ಯ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ ಚಳವಳಿಗಳು ಸಹಜ. ಅದು ಚಳುವಳಿಗಾರರ ಅಭಿಪ್ರಾಯ. ಅದನ್ನು ನಾವು ನಿಲ್ಲಿಸಲು ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ಖಂಡಿಸಿ ರೈತರು, ಕನ್ನಡಪರ ಸಂಘಟನೆಗಳು ಹವೂ ವಿಪಕ್ಷಗಳು ನಡೆಸುತ್ತಿರುವ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಚಳುವಳಿಗಳನ್ನು ನಿಲ್ಲಿಸಲು ಹೋಗುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಚಳುವಳಿಗಳು ಸಹಜ ಎಂದರು.

ನ್ಯಾಯಾಲಯದ ಆದೇಶ ಬರುವ ಮುನ್ನವೇ ಕಾವೇರಿ ನೀರನ್ನು ತಮಿಳುನಾಡಿಗೆ ಬಿಟ್ಟಿದ್ದಾರೆ ಎಂದು ಬಿಜೆಪಿ, ಜೆಡಿಎಸ್ ಪಕ್ಷ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ನ್ಯಾಯಾಲಯದಲ್ಲಿ ಸುಳ್ಳು ಹೇಳಲು ಸಾಧ್ಯವೇ? ಎಂದು ಪ್ರಶ್ನಿಸಿದರು.


Home add -Advt

Related Articles

Back to top button