Politics

*ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಸ್ವಪಕ್ಷದ ನಾಯಕನಿಂದಲೇ ಒತ್ತಾಯ*

ಪಕ್ಷದ ಹಿತದೃಷ್ಟಿಯಿಂದ ರಾಜೀನಾಮೆ ನೀಡಲಿ ಎಂದ ಮಾಜಿ ಸ್ಪೀಕರ್


ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಲೋಕಾಯುಕ್ತ ತನಿಖೆಗೆ ಆದೇಶಿಸಿರುವ ಬೆನ್ನಲ್ಲೇ ಸ್ವಪಕ್ಷದ ಕಾಂಗ್ರೆಸ್ ನಾಯಕರೇ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ, ಸಿದ್ದರಾಮಯ್ಯ ವಿರುದ್ಧದ ಆರೋಪ ಬಿಜೆಪಿ-ಜೆಡಿಎಸ್ ನಾಯಕರ ಕೈವಾಡದಿಂದ ಯಾರೋ ಒಬ್ಬ ರಾಜ್ಯಪಾಲರು ಹಾಗೂ ಕೋರ್ಟ್ ಗೆ ದೂರು ನೀಡಿರುವುದು ನಿಜ. ಪ್ರಧಾನಿ ಮೋದಿ ಕಾಂಗ್ರೆಸ್ ಪಕ್ಷಕ್ಕೆ ಮುಜುಗರವಾಗಲಿ ಎಂದು ಹೀಗೆ ಷಡ್ಯಂತ್ರ ಮಾಡಿದ್ದಾರೆ ಎಂದು ಕಿಡಿಕಾರಿದರು.

ಆದರೆ ಆರೋಪ ಬಂದಿರುವುದರಿಂದ ಕೋರ್ಟ್ ತನಿಖೆಗೆ ಆದೇಶ ನೀಡಿರುವುದರಿಂದ ಪಕ್ಷದ ಹಿತದೃಷ್ಟಿಯಿಂದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ಹೇಳಿದ್ದಾರೆ.

ಎಷ್ಟೇ ಕಳಂಕ ರಹಿತರಾದರೂ ಪಕ್ಷದ ಹಿತದೃಷ್ಟಿಯಿಂದ ಸಿದ್ದರಾಮಯ್ಯ ಸದ್ಯಕ್ಕೆ ರಾಜೀನಾಮೆ ನೀಡಲಿ. ನಿಷ್ಕಳಂಕರಾಗಿ ಹೊರಬಂದ ಬಳಿಕ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎಂದಿದ್ದಾರೆ.

ಸಿದ್ದರಾಮಯ್ಯ ಜೊತೆ ಪಕ್ಷದ 136 ಶಾಸಕರಿದ್ದಾರೆ. ಪಕ್ಷದ ದೃಷ್ಟಿಯಿಂದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ತನಿಖೆ ಎದುರಿಸಲಿ ಎಂದು ಒತ್ತಾಯಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button