*ಪತ್ನಿ ಸೈಟ್ ಹಿಂತಿರುಗಿಸಿದ ಬೆನ್ನಲ್ಲೇ ಸಿದ್ದರಾಮಯ್ಯ ಟ್ವೀಟ್;* *ಅಶೋಕ್, ವಿಜಯೇಂದ್ರ ಕೂಡ ರಿಯಾಕ್ಷನ್*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಪತ್ನಿ ಪಾರ್ವತಿ ಮುಡಾ ಸೈಟ್ ಗಳನ್ನು ಹಿಂತಿರುಗಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ ನನಗೆ ವಿಷಾದ ಇದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಟ್ವೀಟ್ ಹೀಗಿದೆ –
ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನೀಡಿದ್ದ ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ.
ನನ್ನ ವಿರುದ್ದ ರಾಜಕೀಯ ದ್ವೇಷ ಸಾಧನೆಗಾಗಿ ವಿರೋಧ ಪಕ್ಷಗಳು ಸುಳ್ಳು ದೂರನ್ನು ಸೃಷ್ಟಿಸಿ ನನ್ನ ಕುಟುಂಬವನ್ನು ವಿವಾದಕ್ಕೆ ಎಳೆದು ತಂದಿರುವುದು ರಾಜ್ಯದ ಜನತೆಗೂ ತಿಳಿದಿದೆ.
ಈ ಅನ್ಯಾಯಕ್ಕೆ ತಲೆಬಾಗದೆ ಹೋರಾಟ ಮಾಡಬೇಕೆಂಬುದು ನನ್ನ ನಿಲುವಾಗಿತ್ತು.
ಆದರೆ ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ.
ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ ನನಗೆ ವಿಷಾದ ಇದೆ.
ಹೀಗಿದ್ದರೂ ನಿವೇಶನಗಳನ್ನು ಹಿಂದಿರುಗಿಸಿದ ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ.
ಇದರ ಬೆನ್ನಲ್ಲೇ ಸೈಟ್ ಹಿಂತಿರುಗಿಸುವ ಮೂಲಕ ಸಿದ್ದರಾಮಯ್ಯ ತಪ್ಪು ಒಪ್ಪಿಕೊಂಡಿದ್ದು, ಕೂಡಲೇ ತಮ್ಮ ಸ್ಥಾನವನ್ನೂ ಬಿಟ್ಟುಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಆರ್.ಅಶೋಕ ಆಗ್ರಹಿಸಿದ್ದಾರೆ.
ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ @siddaramaiah ಅವರು ತಮ್ಮ ಪತ್ನಿ ಹೆಸರಿನಲ್ಲಿ ಪಡೆದಿದ್ದ 14 ಸೈಟುಗಳನ್ನ ಹಿಂತಿರುಗಿಸುವ ನಿರ್ಧಾರ ಮಾಡಿದ್ದು, ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನ ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟದ ಹಾದಿಯಲ್ಲಿ ಸಿಕ್ಕಿರುವ ಮತ್ತೊಂದು ಜಯ ಎಂದು ಅಶೋಕ್ ಹೇಳಿದ್ದಾರೆ.
ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ
@siddaramaiah ಅವರು ತಮ್ಮ ಪತ್ನಿ ಹೆಸರಿನಲ್ಲಿ ಪಡೆದಿದ್ದ 14 ಸೈಟುಗಳನ್ನ ಹಿಂತಿರುಗಿಸುವ ನಿರ್ಧಾರ ಮಾಡಿದ್ದು, ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನ ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟದ ಹಾದಿಯಲ್ಲಿ ಸಿಕ್ಕಿರುವ ಮತ್ತೊಂದು ಜಯ. ಆದರೆ ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ? ಕದ್ದ ಮಾಲನ್ನು ವಾಪಸ್ಸು ಕೊಟ್ಟ ತಕ್ಷಣ ಕಳ್ಳತನ ಮಾಫಿ ಆಗಿಬಿಡುತ್ತದೆಯೇ? ‘ಕೆಟ್ಟ ಮೇಲೆ ಬುದ್ಧಿ ಬಂತು’ ಎಂಬಂತೆ ಈಗಲಾದರೂ ಸಿದ್ದರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ ಎನ್ನುವುದು ಸಮಾಧಾನಕರ ವಿಷಯ. ಆದರೆ ‘ಅಡಿಕೆಗೆ ಹೋದ ಮಾನ, ಆನೆ ಕೊಟ್ಟರೂ ಬರುವುದಿಲ್ಲ’ ಸಿಎಂ ಸಿದ್ದರಾಮಯ್ಯನವರೇ. ತಾವು ತನಿಖೆ ಎದುರಿಸಲೇ ಬೇಕು. ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲೇ ಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿರಂತರವಾಗಿ ಮುಂದುವರೆಯುತ್ತದೆ ಎಂದಿದ್ದಾರೆ.
https://t.co/eIkCuVpMgX
(https://x.com/RAshokaBJP/status/1840800775217312231?t=-74A3tC7s8kwJZOT4H6HJw&s=03)
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ