
ಪ್ರಗತಿವಾಹಿನಿ ಸುದ್ದಿ, ಮಂಗಳೂರು: ಮಂಗಳೂರಿನ ಕಾವೇರಿ ಅತಿಥಿ ಗೃಹದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಅವರನ್ನು ಭೇಟಿಯಾದರು.
ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಕೆ.ಸಿ.ವೇಣುಗೋಪಾಲ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಬೆಳಗ್ಗೆ ಮಂಗಳೂರಿಗೆ ಬಂದಿದ್ದು, ಇಬ್ಬರೂ ಅತಿಥಿಗೃಹದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಕರ್ನಾಟಕದ ನಾಯಕತ್ವ ಬದಲಾವಣೆ ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ. ಆದರೆ ವಿಷಯ ಈಗಾಗಲೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರೆಗೂ ತಲುಪಿರುವ ಹಿನ್ನೆಲೆಯಲ್ಲಿ ಈ ಹಂತದಲ್ಲಿ ವೇಣುಗೋಪಾಲ ಪಾತ್ರ ಪ್ರಮುಖವೆನಿಸುವುದಿಲ್ಲ.



