Kannada NewsKarnataka NewsLatestPolitics

*BREAKING: ಸಿಎಂ ಸಿದ್ದರಾಮಯ್ಯ ಪತ್ನಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಿಎಂ ಪತ್ನಿ ಪಾರ್ವತಿ ಅವರಿಗೆ ಇಂದು ಸಂಜೆ ಆರೋಗ್ಯದಲ್ಲಿ ಏರುಪೇರಾಗಿದೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಶೇಷಾದ್ರಿಪುರಂ ಬಳಿಯ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಜ್ಞ ವೈದ್ಯರ ತಂಡದಿಂದ ಪಾರ್ವತಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Home add -Advt

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿ ಪ್ರವಾಸದಲ್ಲಿದ್ದಾರೆ.

Related Articles

Back to top button