Karnataka NewsLatestPolitics

*5 ವರ್ಷ ನಾನೇ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಭಾರಿ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, 5 ವರ್ಷ ನಾನೇ ಸಿಎಂ ಎಂದು ಘೋಷಿಸಿದ್ದಾರೆ. ಈ ಮೂಲಕ ಎಲ್ಲಾ ಊಹಾಪೋಹ, ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ವಿಪಕ್ಷ ಬಿಜೆಪಿ ನಾಯಕರು ಸಿಎಂ ಬದಲಾವಣೆ ಖಚಿತ ಎಂದು ಹೇಳಿಕೆ ನೀಡಿರುವ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, 5 ವರ್ಷ ನಾನೇ ಮುಖ್ಯಮಂತ್ರಿ. ಬಿಜೆಪಿಯವರು ಹೇಳಲು ಅವರೇನು ನಮ್ಮ ಹೈಕಮಾಂಡಾ? ಎಂದು ಪ್ರಶ್ನಿಸಿದರು.

ಬಿಜೆಪಿಯವರು ಹಗಲು ಕನಸು ಕಾಣುತ್ತಿದ್ದಾರೆ. ಯಾವುದೇ ಅಭಿವೃದ್ಧಿ ಕೆಲಸ ಮಾಡದೇ, ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಯಾವ ಅನುಮಾನ ಬೇಡ 5 ವರ್ಷ ನಾನೇ ಮುಖ್ಯಮಂತ್ರಿ. ನಮ್ಮ ಸರ್ಕಾರ ಬಂಡೆ ರೀತಿ ಐದು ವರ್ಷಗಳ ಕಾಲ ಇರಲಿದೆ ಎಂದು ಸ್ಪಷ್ಟಪಡಿಸಿದರು.

Home add -Advt


Related Articles

Back to top button