ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರವಾಹ ಭೀತಿ ಎದುರಿಸುತ್ತಿರುವ ಬಾದಾಮಿಯ ಗ್ರಾಮಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಕೊರೊನಾ ಸೋಂಕಿನ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಯಿಂದಲೇ ಜಿಲ್ಲಾಧಿಕಾರಿ ಕ್ಯಾ.ರಾಜೇಂದ್ರ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಮಳೆ ಹಾಗೂ ಪ್ರವಾಹದ ಬಗ್ಗೆ ಮಾಹಿತಿ ಪಡೆದರು. ಸಧ್ಯಕ್ಕೆ ಪ್ರವಾಹ ಸಾಧ್ಯತೆ ಇಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಇದೇ ವೇಳೆ ಬಾದಾಮಿ ತಹಶೀಲ್ದಾರರ ಜೊತೆಗೂ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿದರು. ಮುಳುಗಡೆ ಭೀತಿ ಎದುರಿಸುತ್ತಿರುವ ಗ್ರಾಮಗಳ ಬಗ್ಗೆ ನಿಗಾ ವಹಿಸುವಂತೆ ಸೂಚಿಸಿದರು.
ಕೋವಿಡ್-19 ಸೋಂಕು ಕುರಿತಾಗಿಯೂ ತಹಶೀಲ್ದಾರರಿಂದ ಮಾಹಿತಿ ಪಡೆದುಕೊಂಡ ಸಿದ್ದರಾಮಯ್ಯ ಅವರು, ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಲೋಪವಾಗದಂತೆ ನೋಡಿಕೊಳ್ಳಲು ಸೂಚಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ