*ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ತಕ್ಷಣ ಪರಿಹಾರ ಒದಗಿಸಲು ಸಿಎಂ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಮನೆ ಮತ್ತು ಬೆಳೆ ಹಾನಿಗೀಡಾದವರಿಗೆ ತಕ್ಷಣ ಪರಿಹಾರವನ್ನು ಒದಗಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಸೋಮವಾರ ಬೆಳಗಾವಿ ಜಿಲ್ಲೆಯ ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲೆಯಲ್ಲಿ ಜೂನ್‌ನಿಂದ ಇದುವರೆಗೆ 565 ಮಿ.ಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.62ರಷ್ಟು ಹೆಚ್ಚು ಮಳೆಯಾಗಿದೆ. ಅತಿವೃಷ್ಟಿಯಿಂದ 6ಮಂದಿ ಸಾವಿಗೀಡಾಗಿದ್ದು, ಎಲ್ಲಾ ಪ್ರಕರಣಗಳಲ್ಲಿ ಪರಿಹಾರ ಒದಗಿಸಲಾಗಿದೆ. 12 ಜಾನುವಾರುಗಳು ಸಾವನ್ನಪ್ಪಿದ್ದು, ಪರಿಹಾರ ಒದಗಿಸಲಾಗಿದೆ. ಸಾವಿಗೀಡಾದ ಒಂದು … Continue reading *ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ತಕ್ಷಣ ಪರಿಹಾರ ಒದಗಿಸಲು ಸಿಎಂ ಸೂಚನೆ*