BJP ಭ್ರಷ್ಟಾಚಾರಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ?; ಸಿದ್ದರಾಮಯ್ಯ ಪ್ರಶ್ನೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬಿಜೆಪಿ ಸರ್ಕಾರದ 40% ಕಮಿಷನ್ ಬಗ್ಗೆ ಹೇಳಿದರೆ ಸಿಎಂ ಬಸವರಾಜ್ ಬೊಮ್ಮಾಯಿ ನಮ್ಮ ಬಳಿ ದಾಖಲೆ ನೀಡುವಂತೆ ಕೇಳಿದ್ದರು. ಈಗ ಬಿಜೆಪಿ ಶಾಸಕರ ಪುತ್ರ ರೆಡ್ ಹ್ಯಾಂಡ್ ಆಗಿ ಕಂತೆ ಕಂತೆ ನೋಟುಗಳ ಸಮೇತ ಸಿಕ್ಕಿ ಬಿದ್ದಿದ್ದಾರೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಭ್ರಷ್ಟಾಚಾರದಲ್ಲಿಯೇ ನಿರತವಾಗಿದೆ. ಅಧಿಕಾರಕ್ಕೆ ಒಂದು ಒಂದು ಒಳ್ಳೆ ಆಡಳಿತ ನೀದಲಿಲ್ಲ, ಜನಪರ ಯೀಜನೆ ಜಾರಿ ಮಾಡಿಲ್ಲ, ಬರು ಲೂಟಿ ಮಾಡುವುದರಲ್ಲಿ ಕಾಲ ಕಳೆದಿದೆ ಎಂದು ಗುಡುಗಿದರು.

ಸ್ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಿಜೆಪಿ ಭ್ರಷ್ಟಾಚಾರಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? 40% ಕಮಿಷನ್ ಬಗ್ಗೆ ಗುತ್ತಿಗೆದಾರರು ಸರ್ಕಾರದ ವಿರುದ್ಧ ಪ್ರಧಾನಿ ಮೋದಿಯವರಿಗೆ ಪತ್ರ ಬರೆದರು. ಆದರೂ ಪ್ರಧಾನಿ ಯಾವುದೆ ಕ್ರಮ ಕೈಗೊಳ್ಳಲಿಲ್ಲ. ಪ್ರಧಾನಿ ಮೋದಿ ಕೂಡ ಸರ್ಕಾರದ ಭ್ರಷ್ಟಾಚಾರ ಬೆಂಬಲಿಸುತ್ತಿದ್ದಾರೆ ಎಂಬ ಸಂದೇಶವನ್ನು ನಾಡಿನ ಜನತೆಗೆ ರವಾನೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಆಪರೇಷನ್ ಕಮಲ ಮಾಡಿ ಶಾಸಕರನ್ನ ಕೊಂಡುಕೊಂಡು ಹಿಂಬಾಗಿಲಿನಿಂದ ಅನೈತಿಕವಾಗಿ ಸರ್ಕಾರ ರಚನೆ ಮಾಡಿದ್ದಾರೆ. 2018ರಲ್ಲಿ ಬಹುಮತ ಬಾರದಿದ್ದಕ್ಕೆ ಸಮ್ಮಿಶ್ರ ಸರ್ಕಾರ ಮಾಡಿದ್ವಿ. 30 ಸ್ಥಾನವಿದ್ದ ಜೆಡಿಎಸ್‌ನ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ವಿ. ಅವರ ಕಾರ್ಯವೈಖರಿಯಿಂದ ಸರ್ಕಾರ ಹೋಯಿತು. ಶಾಸಕರನ್ನ ಭೇಟಿ ಮಾಡಲಿಲ್ಲ, ಹೊಟೆಲ್​​ನಲ್ಲಿ ಉಳಿದುಕೊಂಡು ಅಧಿಕಾರ ಮಾಡಿದರು. ಇದರಿಂದ ಅಧಿಕಾರವನ್ನು ಕುಮಾರಸ್ವಾಮಿ ಕಳೆದುಕೊಂಡರು. ಇದಕ್ಕೆ ಕಾಯುತ್ತಿದ್ದ ಬಿಜೆಪಿ ಆಪರೇಷನ್ ಕಮಲ ಮಾಡಿ ಸರ್ಕಾರ ಮಾಡಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎರಡನೇ ಹಂತದ ಪ್ರಜಾಧ್ವನಿ ಯಾತ್ರೆ ಮಾಡಿ ಇಂದಿಗೆ ಒಂದು ತಿಂಗಳು ಆಯ್ತು. ಫೆ.3ರಂದು ಬಸವ ಕಲ್ಯಾಣದಿಂದ ಪ್ರಜಾಧ್ವನಿ ಯಾತ್ರೆ ಪ್ರಾರಂಭ ಮಾಡಿದ್ದೇವೆ. 40 ಹೆಚ್ಚು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ಕೊಟ್ಟಿದ್ದೇನೆ. ಜನರ ಭಾವನೆ, ಹಂಚಿಕೆಗಳನ್ನು, ಸಲಹೆಗಳನ್ನು ತಿಳಿದುಕೊಳ್ಳಬೇಕೆಂಬ ಉದ್ದೇಶದಿಂದ ಪ್ರಜಾಧ್ವನಿ ಯಾತ್ರೆ ಮಾಡಿದ್ದೇವೆ ಹೇಳಿದ್ದಾರೆ.

ಎರಡು ಹಂತದ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಂಡಿದ್ದೇವೆ. ಜನವರಿಯಲ್ಲಿ ಜಿಲ್ಲಾಮಟ್ಟದ ಪ್ರಜಾಧ್ವನಿ ಯಾತ್ರೆ ಮುಗಿದಿದೆ. 2 ಗುಂಪುಗಳಾಗಿ ವಿಧಾನಸಭಾ ಕ್ಷೇತ್ರವಾರು ಎರಡನೇ ಹಂತದ ಪ್ರಜಾಧ್ವನಿ ಯಾತ್ರೆ ಮಾಡುತ್ತಿದ್ದೇವೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಒಂದು, ನನ್ನ ನೇತೃತ್ವದಲ್ಲಿ ಒಂದು ತಂಡ ಪ್ರವಾಸ ಮಾಡುತ್ತಿದ್ದೇವೆ ಎಂದು ಹೇಳಿದರು.

ಈ ಬಾರಿ ಮಹಿಳೆಯರು ಮತ್ತು ಯುವಕರು ಹೆಚ್ಚು ಹೆಚ್ಚು ಜನರು ಭಾಗವಹಿಸುತ್ತಿದ್ದಾರೆ. ನಮ್ಮ ನಿರೀಕ್ಷೆಗೆ ಮೀರಿ ಅಭೂತಪೂರ್ವ ಯಶಸ್ಸು ಕಾಣುತ್ತಿದ್ದೇವೆ. ಯಾತ್ರೆಯ ಯಶಸ್ಸು ಕಂಡಾಗ ಬಿಜೆಪಿ ಮುಂದಿನ ಚುನಾವಣೆಯಲ್ಲಿ ದೂಳಿಪಟ ಆಗುವುದು ಸಂಶಯವಿಲ್ಲ. ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುತ್ತದೆ ಅನ್ನೋ ವಿಶ್ವಾಸ ಬಂದಿದೆ. ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಬಿರುಗಾಳಿ ಪ್ರಾರಂಭವಾಗಿದೆ. ಈ ರಾಜ್ಯದ ಜನರು ಕಾಂಗ್ರೆಸ್ ಪಕ್ಷದ ಪರವಾಗಿ ಇದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರಣಾಳಿಕೆ ತಯಾರಿ ಮಾಡಿ ಅಲ್ಲಿನ ಜನರ ಸಮಸ್ಸೆಗಳಿಗೆ ಸ್ಪಂದಿಸುತ್ತೇವೆ. ಪ್ರಜಾಧ್ವನಿ ಯಾತ್ರೆ 2 ತಂಡಗಳಲ್ಲಿ ಸಂಚರಿಸುತ್ತಿದೆ ಒಂದು ಡಿಕೆಶಿ ನೇತೃತ್ವದಲ್ಲಿ ಮತ್ತೊಂದು ನನ್ನ ನೇತೃತ್ವದಲ್ಲಿ ನಡೆಯುತ್ತಿದೆ. ಪ್ರಜಾಧ್ವನಿ ಯಾತ್ರೆಯಲ್ಲಿ ಮಹಿಳೆಯರು ಮತ್ತು ಯುವಕರು ಹೆಚ್ಚಾಗಿ ಸೇರುತ್ತಿದ್ದಾರೆ ಮತ್ತು ಕಾಂಗ್ರೆಸ್ ಮತ್ತೆ ರಾಜ್ಯದ ಚುಕ್ಕಾಣಿ ಹಿಡಿಯುತ್ತದೆ ಎಂಬ ವಿಶ್ವಾಸ್ ಹೆಚ್ಚಿದೆ. ಬಿಜೆಪಿ ಸರ್ಕಾರ 9 ವರ್ಷದಿಂದ ದೇಶದಲ್ಲಿದ್ದು ಜನ ಬಿಜೆಪಿಯ ದುರಾಡಳಿತದಿಂದ ಬೇಸತ್ತಿದ್ದಾರೆ. ಬಿಜೆಪಿ ಅನೈತಿಕ ಸರಕಾರ ಹೊಂದಿದೆ ಅದು ಆಪರೇಷನ್ ಕಮಲ ಮಾಡಿ ರಾಜ್ಯದ ಚುಕ್ಕಾಣಿ ಹಿಡಿದಿದೆ ಎಂದು ಹೇಳಿದರು.

ಬಿಜೆಪಿ ಒಂದು ಭ್ರಷ್ಟ ಸರ್ಕಾರ: ಬಿಜೆಪಿ ಭ್ರಷ್ಟಾಚಾರದಿಂದ ತುಂಬಿ ತುಳಿಕಿದೆ , ಪ್ರಧಾನಿ ಮೋದಿ ರಾಜ್ಯ ಬಿಜೆಪಿಯ ಭ್ರಷ್ಟಾಚಾರಕ್ಕೆ ಬೆಂಬಲ ನೀಡುತ್ತಿದ್ದಾರೆ. ನಾನು ಆರೋಪ ಮಾಡಿದ ತಕ್ಷಣವೇ 8 ಪ್ರಕರಣಗಳನ್ನು ಸಿಬಿಐಗೆ ಒಪ್ಪಿಸಿದ್ದೆ. ಆದರೆ ಈ ಸರ್ಕಾರ ಒಂದು ಪ್ರಕರಣಗಳನ್ನು ಕೂಡ ಒಪ್ಪಿಸಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದರು.

5ವರ್ಷ ವಿರೋಧ ಪಕ್ಷದಲ್ಲಿದ್ದರು ಧ್ವನಿ ಎತ್ತದ ಬಿಜೆಪಿ ತಮ್ಮ ಭ್ರಷ್ಟಾಚಾರ ಮುಚ್ಚಿಕೊಳ್ಳಲು ನನ್ನ ಮೇಲೆ ಆರೋಪ ಮಾಡುತ್ತಿದೆ, ಬಿಜೆಪಿಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ಹಬ್ಬಿದೆ. ನಾವು ಮಾಡಿದ ಕಾರ್ಯಕ್ರಮಗಳಿಗೆ ಬಿಜೆಪಿ ಹೆಸರು ಬಳಸುತ್ತಿದೆ. 14,54,000ಮನೆ ಕಟ್ಟಿಸಿದ್ದು ಬಿಜೆಪಿ ಒಂದು ಮನೆ ಕೂಡ ನೀಡಿಲ್ಲ ಎಂದು ಹೇಳಿದರು.

ಬಿಜೆಪಿ ಮನೆ ಮಂಜೂರು ಮಾಡದೇ ಸುಳ್ಳು ಹೇಳುತ್ತಿದೆ ಎಂದು ಹೇಳಿದ್ದಾರೆ,168 ಭರವಸೆಗಳನ್ನು ಕಾಂಗ್ರೆಸ್ ಇರೇಡಿಸಿದೆ. ಆದ್ರೆ ಬಿಜೆಪಿ 10% ಭರವಸೆಗಳನ್ನೂ ಕೂಡ ಇರಿಡಿಸಿಲ್ಲ ಎಂದು ಅವರು, ಬಿಜೆಪಿ ಸರ್ಕಾರಿ ಹಣವನ್ನು ವೆಚ್ಚ ಮಾಡುತ್ತಿದೆ, ಮೋದಿ ರೋಡ್ ಶೋಗೆ ಬಿಜೆಪಿಯವರು 1000 ಸಾವಿರ ರೂ. ನೀಡುತ್ತೇವೆ ಎಂದು ಹೇಳಿ 500 ರೂ. ನೀಡುತ್ತಿದ್ದಾಗ ಜನ ಜಗಳ ಮಾಡಿದ್ದಾರೆ ಎಂಬ ವಿಷಯವನ್ನು ನಾನು ಚರ್ಚಿಸುತ್ತಿದ್ದಾಗ ಅದೇ ವಿಡಿಯೋವನ್ನು ಬಿಜೆಪಿಯವರು ತಿರುಚಿ ನನ್ನ ಮೇಲೆ ಆರೋಪ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಸುದ್ದಿಗೋಷ್ಠಿ‌ಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ, ಮಾಜಿ ಸಚಿವ, ಶಾಸಕ ಜಮೀರ್‌ ಅಹ್ಮದ್‌ ಖಾನ್‌, ವಿಧಾನ ಪರಿಷತ್‌ ಸದಸ್ಯರಾದ ಪ್ರಕಾಶ್‌ ರಾಠೋಡ, ಚನ್ನರಾಜ ಹಟ್ಟಿಹೊಳಿ, ಮಾಜಿ ಸಚಿವರಾದ ವೀರಕುಮಾರ ಪಾಟೀಲ್‌, ಡಿ.ಬಿ. ಇನಾಮದಾರ್‌, ಮಾಜಿ ಶಾಸಕರಾದ ಅಶೋಕ ಪಟ್ಟಣ, ಶ್ಯಾಮ್‌ ಘಾಟಗೆ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಲಕ್ಷಣರಾವ್‌ ಚಿಂಗಳೆ, ಬೆಳಗಾವಿ ಗ್ರಾಮೀಣ ಕಾಂಗ್ರೆಸ್‌ ಅಧ್ಯಕ್ಷ ವಿನಯ ನಾವಲಗಟ್ಟಿ, ಬೆಳಗಾವಿ ನಗರ ಅಧ್ಯಕ್ಷ ರಾಜು ಸೇಠ್‌ ಸೇರಿದಂತೆ ಅನೇಕ ರಾಜ್ಯ ಮುಖಂಡರು ಇದ್ದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button