Kannada NewsKarnataka NewsLatestPolitics

*ಸಿಎಂ ಸಿದ್ದರಾಮಯ್ಯ ಜನ್ಮದಿನ: ದೆಹಲಿಯಲ್ಲಿ ಮುಖ್ಯಮಂತ್ರಿ ಭೇಟಿಯಾಗಿ ಶುಭ ಕೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನ್ಮ ದಿನದ ಸಂದರ್ಭದಲ್ಲಿ ನವದೆಹಲಿಯ ಕರ್ನಾಟಕ ಭವನದಲ್ಲಿ ಅವರನ್ನು ಭೇಟಿ ಮಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಸಿದ್ದರಾಮಯ್ಯ ಅವರಿಗೆ ಶುಭಾಶಯ ಕೋರಿದರು.

ರಾಜ್ಯ ಕಂಡ ಅತ್ಯಂತ ದಕ್ಷ ಹಾಗೂ ಪ್ರಾಮಾಣಿಕ ರಾಜಕಾರಣಿಗಳಾಗಿರುವ ಸಿದ್ದರಾಮಯ್ಯ ಅವರಿಗೆ, ಬಡವರು, ರೈತರು, ಶ್ರಮಿಕರು, ದಲಿತರು ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಯ ಕೆಲಸಗಳನ್ನು ಮುಂದುವರಿಸಲು, ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಯ ಕೆಲಸ ಮಾಡಲು ಭಗವಂತ ಆರೋಗ್ಯ, ಆಯುಷ್ಯ ಭಾಗ್ಯವನ್ನು ಕರುಣಿಸಲಿ ಎಂದು ಸಚಿವೆ ಹೆಬ್ಬಾಳಕರ್ ಮತ್ತು ಪರಿಷತ್ ಸದಸ್ಯ ಹಟ್ಟಿಹೊಳಿ ಪ್ರಾರ್ಥಿಸಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button