Kannada NewsKarnataka NewsLatestPolitics

*ಬಿಜೆಪಿಗೆ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ; ಸಿಎಂ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನಾವು ಅಧಿಕಾರಕ್ಕೆ ಬಂದು 6 ತಿಂಗಳಾಯಿತು. ಬಿಜೆಪಿ ಬ್ರಾಂಡ್ ಬೆಂಗಳೂರು ಮಾಡಿದ್ದಾರೆಯೇ. ಅವರಿಂದ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು. ಬ್ರಾಂಡ್ ಬೆಂಗಳೂರು ಕುರಿತಂತೆ ಬಿಜೆಪಿ ಸರಿಯಾಗಿ ಕೆಲಸ ಆಗುತ್ತಿಲ್ಲ ಎಂದು ಆರೋಪಿಸಿರುವ ಬಗ್ಗೆ ಮಾತನಾಡಿ ಉಚ್ಚ ನ್ಯಾಯಾಲಯ ಅವರಿಗೆ ಛೀಮಾರಿ ಹಾಕಿದೆ. ಅವರಿಗೆ ಬೆಂಗಳೂರಿನ ಬಗ್ಗೆ ಮಾತನಾಡಲು ಯಾವ ನೈತಿಕ ಹಕ್ಕಿದೆ ಎಂದರು.

ಉತ್ತರ ಕರ್ನಾಟಕದಲ್ಲಿ ಸದನ ನಡೆಯುತ್ತಿದ್ದು ಸಚಿವರು ತೆಲಂಗಾಣದಲ್ಲಿದ್ದಾರೆ ಎಂಬ ಹೇಳಿಕೆಗೆ ಉತ್ತರಿಸಿ ಎಲ್ಲರೂ ಅಲ್ಲಿಲ್ಲ, ಒಂದಿಬ್ಬರು ಹೋಗಿದ್ದಾರೆ. ಅದಕ್ಕೆ ರಾಜಕೀಯವನ್ನೂ ಮಾಡಬೇಕಲ್ಲ. ಜಮೀರ್ ಅಹ್ಮದ್ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರು ಬರಬೇಕಷ್ಟೇ. ಬಹುತೇಕ ಜನ ವಾಪಸ್ಸು ಬಂದಿದ್ದಾರೆ ಎಂದರು.

Home add -Advt

ಅಭಿವೃದ್ಧಿ ಭಾಷಣವಿಲ್ಲ ಸಿದ್ದರಾಮಯ್ಯ ಕೇವಲ ಓಲೈಕೆ ಭಾಷಣ ಮಾಡುತ್ತಾರೆ ಎಂಬ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅದೆಲ್ಲಾ ನಿಮ್ಮಿಂದಲೇ ಆಗಿದೆ. ಎಲ್ಲಾ ಸಮುದಾಯಗಳು ಒಳಗೊಂಡಂತೆ ಮುಸ್ಲಿಮರನ್ನು ರಕ್ಷಣೆ ಮಾಡಲಾಗುವುದು ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button